ರಾಜ್ಯದಲ್ಲಿ ಇಂದೂ ಕೊರೋನಾ ಮಹಾಸ್ಫೋಟ: 49,058 ಮಂದಿಗೆ ಪಾಸಿಟಿವ್; ಬೆಂಗಳೂರಿನಲ್ಲಿ 139 ಸೇರಿ 328 ಮಂದಿ ಸಾವು

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಗುರುವಾರ ಒಂದೇ ದಿನ ಬರೋಬ್ಬರಿ 328 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 17212ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಗುರುವಾರ ಒಂದೇ ದಿನ ಬರೋಬ್ಬರಿ 328 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 17212ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ  49,058 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 17,90,104ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 23,706 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 8.87,086ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 139 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 18943 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 12,55,797ಕ್ಕೆ ಏರಿಕೆಯಾಗಿದೆ. ಇನ್ನು 5,17,075 ಸಕ್ರೀಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com