ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ಡಾ.ಶಿವರಾಮ ಕಾರಂತ ಲೇಔಟ್ ಸಮಸ್ಯೆಗಳನ್ನು ಬಗೆಹರಿಸಲು ನೇಮಕ ಮಾಡಿದ ಸಮಿತಿಗೆ ಅಡ್ಡಿಪಡಿಸಿದ್ದಕ್ಕಾಗಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಕಾರಣ ಸುಪ್ರೀಂ ಕೋರ್ಟ್ ಬುಧವಾರ ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದೆ.
ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ಬೆಂಗಳೂರು: ಡಾ.ಶಿವರಾಮ ಕಾರಂತ ಲೇಔಟ್ ಸಮಸ್ಯೆಗಳನ್ನು ಬಗೆಹರಿಸಲು ನೇಮಕ ಮಾಡಿದ ಸಮಿತಿಗೆ ಅಡ್ಡಿಪಡಿಸಿದ್ದಕ್ಕಾಗಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಕಾರಣ ಸುಪ್ರೀಂ ಕೋರ್ಟ್ ಬುಧವಾರ ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದೆ.

ಈ ವರೆಗೂ ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಏಕೆ ಕ್ರಿಮಿನಲ್ ಮೊಕದ್ದಮೆ ದಾಖಲಾಗಿಲ್ಲ ಎಂದು ಪ್ರಶ್ನಿಸಿದ ಸರ್ವೋಚ್ಚ ನ್ಯಾಯಾಲಯ ಕರ್ನಾಟಕದ ಅಡ್ವೊಕೇಟ್ ಜನರಲ್‌ಗೆ ತಕ್ಷಣ ಅವರ ವಿರುದ್ಧ ಮೊಕದ್ದಮೆ ಹೂಡಲು ಆದೇಶಿಸಿದೆ ಎಂದು ಉನ್ನತ ಸ್ಥಾನದಲ್ಲಿರುವ ಬಿಡಿಎ ಮೂಲಗಳು ಮಾಹಿತಿ ನೀಡಿದೆ.

ನ್ಯಾಯಾಧೀಶರಾದ ಅಬ್ದುಲ್ ಎಸ್ ನಜೀರ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಇಬ್ಬರು ನ್ಯಾಯಾಧೀಶರ ಪೀಠ ತಮ್ಮ ತೀರ್ಪು ನೀಡಿದ್ದು ಮೂರು ಸದಸ್ಯರ ಸಮಿತಿಯ ಅಧ್ಯಕ್ಷರು ಸಲ್ಲಿಸಿದ ವರದಿಯ ವರ್ಚುವಲ್ ವಿಚಾರಣೆ ನಡೆದಿದೆ.

ಮಾರ್ಚ್ 9 ರಂದು ಸಮಿತಿಯು ಕರ್ನಾಟಕ ರಾಜ್ಯ ರೈತ ಸಂಘ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ 17 ಗ್ರಾಮಗಳಲ್ಲಿ ಸುಳ್ಳುಮಾಹಿತಿ ಹರಡಿದ್ದಲ್ಲದೆ ಲೇಔಟ್ ಯೋಜನೆಗೆ ಸೇರಬೇಡಿ ಎಂದು ಪ್ರಚಾರ ನಡೆಸಿದ್ದಕ್ಕಾಗಿ ನೋಟಿಸ್ ನೀಡಲಾಗಿತ್ತು, ಮಾರ್ಚ್ 15 ರ ಮುನ್ನ ಇದಕ್ಕೆ ಕ್ರಮ ಜರುಗಿಸುವಂಂತೆ ಕೇಳಕಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com