ಹಿರಿಯ ಲೇಖಕ ಭಾಸ್ಕರ್ ಮಯ್ಯ ನಿಧನ

ಹಿರಿಯ ಬರಹಗಾರ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಲಿಗ್ರಾಮ ಗುಂಡ್ಮಿಯ ಭಾಸ್ಕರ್ ಮಯ್ಯ ಅವರು ಹೃದಯಾಘಾತದಿಂದಾಗಿ ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಭಾಸ್ಕರ್ ಮಯ್ಯ
ಭಾಸ್ಕರ್ ಮಯ್ಯ

ಉಡುಪಿ: ಹಿರಿಯ ಬರಹಗಾರ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಲಿಗ್ರಾಮ ಗುಂಡ್ಮಿಯ ಭಾಸ್ಕರ್ ಮಯ್ಯ ಅವರು ಹೃದಯಾಘಾತದಿಂದಾಗಿ ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಅವರು ಕುಂದಾಪುರದ ಭಂಡಾರ್ಕರ್ ಕಾಲೇಜಿನಲ್ಲಿ ಹಿಂದಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.

ಹಿಂದಿ, ಸಂಸ್ಕೃತ, ಪಾಲಿ, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪರಿಣತರಾಗಿದ್ದ ಅವರು ವಿವಿಧ ವಿಶ್ವವಿದ್ಯಾಲಯಗಳಿಂದ ಎಂ.ಎ. ಪದವಿ ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪಡೆದಿದ್ದರು.

ಡಾ. ಮಯ್ಯ ಸುಮಾರು 52 ಪುಸ್ತಕಗಳು ಮತ್ತು ನೂರಾರು ಸಂಶೋಧನಾ ಲೇಖನಗಳನ್ನು ಬರೆದಿದ್ದಾರೆ. ಅಲ್ಲದೆ ಹಿಂದಿಯ ಸಾಕಷ್ಟು ಪ್ರಸಿದ್ದ ಕೃತಿಗಳನ್ನು ಕನ್ನಡಕ್ಕೆ ತಂದಿದ್ದರು. 

ಭಾಸ್ಕರ್ ಮಯ್ಯ ಪತ್ನಿ, ಮಗ ಮತ್ತು ಮಗಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com