ಬೆಂಗಳೂರು ಐಟಿ ಕಾರಿಡಾರ್, ಅಪಾರ್ಟ್'ಮೆಂಟ್ ನಿವಾಸಿಗಳಿಂದ ಕೊರೋನಾ ಸೋಂಕು ವ್ಯಾಪಕ!

10 ದಿನಗಳ ಕೊರೋನಾ ಕರ್ಫ್ಯೂ ಜಾರಿಯಲ್ಲಿದ್ದರೂ, ಬೆಂಗಳೂರಿನ ಐಟಿ ಕಾರಿಡಾರ್ ಪ್ರಮುಖವಾಗಿ ಮಹದೇವಪುರ-ವೈಟ್'ಫೀಲ್ಟ್ ನಿಂದ ನಗರದಲ್ಲಿ ಕೊರೋನಾ ಸೋಂಕು ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: 10 ದಿನಗಳ ಕೊರೋನಾ ಕರ್ಫ್ಯೂ ಜಾರಿಯಲ್ಲಿದ್ದರೂ, ಬೆಂಗಳೂರಿನ ಐಟಿ ಕಾರಿಡಾರ್ ಪ್ರಮುಖವಾಗಿ ಮಹದೇವಪುರ-ವೈಟ್'ಫೀಲ್ಟ್ ನಿಂದ ನಗರದಲ್ಲಿ ಕೊರೋನಾ ಸೋಂಕು ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. 

ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೋವಿಡ್-19 ನಿಯಂತ್ರಣ ಕ್ರಮಗಳನ್ನು ಪರಿಶೀಲಿಸುವ ಸಲುವಾಗಿ ನಿನ್ನೆಯಷ್ಟೇ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಅರವಿಂದ ಲಿಂಬಾವಳಿ ಅವರು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರ ಉಪಸ್ಥಿತಿಯಲ್ಲಿ ಬಿಬಿಎಂಪಿ ಆರೋಗ್ಯ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಉನ್ನತಾಧಿಕಾರಿಗಳ ಸಭೆ ನಡೆಸಿದರು.

ಸಭೆಯು 4 ಗಂಟೆಗಳ ಕಾಲ ಸುದೀರ್ಘವಾಗಿ ನಡೆಯಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನೂರಾರು ಅಪಾರ್ಟ್ಮೆಂಟ್ ಸಂಕೀರ್ಣಗಳಲ್ಲಿ ವಾಸಿಸುವ ಕೆಲವು ವಿದ್ಯಾವಂತ ಹಾಗೂ ಶ್ರೀಮಂತರು, ಮಧ್ಯಮವರ್ಗದ ನಿವಾಸಿಗಳ ಬೇಜವಾಬ್ದಾರಿತದ ವರ್ತನೆಯಿಂದ ಸೋಂಕು ಹೆಚ್ಚಾಗುತ್ತಿದೆ. ಅಪಾರ್ಟ್ ಮೆಂಟ್ ಗಳಲ್ಲಿ ವಾಸವಿರುವವರು ಸೋಂಕುಗೊಳಗಾಗಿದ್ದರು, ಮನೆಗಳಲ್ಲಿಯೇ ಇದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂತಹವರು ಕೆಲ ಸ್ಥಳೀಯರ ಸಹಾಯ ಪಡೆದು ಮನೆಗಳಲ್ಲಿ ಕೆಲಸ ಮಾಡಿಸಿಕೊಳ್ಳುತ್ತಿದ್ದು, ಸಹಾಯ ಮಾಡುವ ಈ ಕೆಲಸವದು ನಗರದಲ್ಲಿ ಸೋಂಕು ಹರಡಲು ಕಾರಣರಾಗುತ್ತಿದ್ದಾರೆಂದು ಹೇಳಿದ್ದಾರೆ. 

ಪರಿಸ್ಥಿತಿ ಹೀಗೆಯೇ ಮುಂದುವರೆದಿದ್ದೇ ಆದರೆ, ಕೊರೋನಾ ಮೊದಲ ಅಲೆ ವೇಳೆ ಕೈಗೊಂಡ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಲಿಂಬಾವಳಿಯವರು ಹೇಳಿದ್ದಾರೆ. 

ಬಳಿಕ ಮಾತನಾಡಿದ ಭೈರತಿ ಬಸವರಾಜ್ ಅವರು, ಕರ್ತವ್ಯ ಲೋಪ ಎಸಗುವ ಪೌರಕಾರ್ಮಿಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ. 

ಕೋವಿಡ್ ರೋಗಿಗಳು ಜವಾಬ್ದಾರಿಯುತವಾಗಿ ವರ್ತಿಸದಿದ್ದರೆ, ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಕೆಲವು ವ್ಯಕ್ತಿಗಳಿಂಗ ಸಾರ್ವಜನಿಕರಿಗೆ ಸಮಸ್ಯೆಯಾಗಲು ಬಿಡುವುದಿಲ್ಲ. ಇದೊಂದು ರಾಷ್ಟ್ರೀಯ ಆರೋಗ್ಯ ತುರ್ತುಸ್ಥಿತಿ ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ. ಸಾಂಕ್ರಾಮಿಕ ರೋಗವನ್ನು ಎದುರಿಸಲು ಸರ್ಕಾರವು ಕಂಟೈನ್ಮೆಂಟ್ ಜೋನ್ ಮತ್ತು ಮೈಕ್ರೋ ಕಂಟೈನ್ಮೆಂಟ್ ಜೋನ್ ಗಳನ್ನು ರಚನೆ ಮಾಡಬಹುದು ಎಂದು ಹೇಳಿದೆ. ಹೀಗಾಗಿ ಈ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸೋಂಕಿತರಿಗೆ ಚಿಕಿತ್ಸೆ ನೀಡಲು ಕೋವಿಡ್ ಕೇರ್ ಕೇಂದ್ರಗಳಾಗಿ ಪರಿವರ್ತಿಸಲಾಗುವುದು, ಈಗಾಗಲೇ ಈ ತಂತ್ರಗಳನ್ನು ಮಹಾರಾಷ್ಟ್ರದಲಿ ಅನುಸರಿಸಲಾಗುತ್ತಿದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com