ಉಲ್ಲೇಖಿತ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಯ ದರ ಪರಿಷ್ಕರಿಸಿದ ರಾಜ್ಯ ಸರ್ಕಾರ, ವಿವರ ಹೀಗಿದೆ...

ಕೊರೋನಾ ಎರಡನೇ ಅಲೆ ತಾಂಡವವಾಡಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದಷ್ಟು ಸಮಸ್ಯೆ ಉಂಟಾಗಿದೆ. ಖಾಸಗಿ ಆಸ್ಪತ್ರೆಗಳು ಪರಿಸ್ಥಿತಿಯ ಲಾಭ ಮಾಡಿಕೊಂಡು ರೋಗಿಗಳ ಕುಟುಂಬಗಳಿಂದ ಹಣ ಪೀಕುತ್ತಿವೆ ಎಂಬ ದೂರುಗಳು ಕೇಳಿಬರುತ್ತಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೊರೋನಾ ಎರಡನೇ ಅಲೆ ತಾಂಡವವಾಡಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದಷ್ಟು ಸಮಸ್ಯೆ ಉಂಟಾಗಿದೆ. ಖಾಸಗಿ ಆಸ್ಪತ್ರೆಗಳು ಪರಿಸ್ಥಿತಿಯ ಲಾಭ ಮಾಡಿಕೊಂಡು ರೋಗಿಗಳ ಕುಟುಂಬಗಳಿಂದ ಹಣ ಪೀಕುತ್ತಿವೆ ಎಂಬ ದೂರುಗಳು ಕೇಳಿಬರುತ್ತಿವೆ.

ಈ ಮಧ್ಯೆ, ಸರ್ಕಾರ ಉಲ್ಲೇಖಿಸುವ ಕೋವಿಡ್ 19 ರೋಗಿಗಳು ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗಳ ಅದೇ ರೀತಿ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ದರವನ್ನು ಪರಿಷ್ಕರಿಸಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಸಾಮಾನ್ಯ ವಾರ್ಡ್ ಗೆ 5,200 ರೂಪಾಯಿ, ಹೆಚ್ ಡಿಯುಗಳಲ್ಲಿ 8 ಸಾವಿರ ರೂಪಾಯಿ, ವೆಂಟಿಲೇಟರ್ ಇಲ್ಲದೆ ಐಸೊಲೇಷನ್ ಐಸಿಯು ವಾರ್ಡ್ ಗೆ 9,750 ರೂಪಾಯಿ, ವೆಂಟಿಲೇಟರ್ ಸಹಿತ ಐಸೊಲೇಷನ್ ಐಸಿಯು ವಾರ್ಡ್ ನಲ್ಲಿ 11,500 ರೂಪಾಯಿ ದರವನ್ನು ಸರ್ಕಾರ ನಿಗದಿಪಡಿಸಿದೆ.

ಪಿಪಿಇ ಮತ್ತು ಇತರ ಅಗತ್ಯ ವೈದ್ಯಕೀಯ ವಸ್ತುಗಳಿಗೆ ಸೇರಿ ಈ ದರ ಅನ್ವಯವಾಗುತ್ತದೆ. ಸರ್ಕಾರದ ಆದೇಶವನ್ನು ಪಾಲಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ, ರೋಗಿಗಳಿಂದ ಹೆಚ್ಚಿನ ದರ ಕೇಳಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಆದೇಶದಲ್ಲಿ ಎಚ್ಚರಿಕೆಯನ್ನು ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com