ಬೆಡ್ ಬ್ಲಾಕಿಂಗ್ ಹಗರಣ: ಸಿಸಿಬಿ ಪೊಲೀಸರಿಂದ ಪ್ರಮುಖ ಆರೋಪಿ ಪತ್ತೆ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೊರೋನಾ ವಾರ್ ರೂಂನಲ್ಲಿ ನಡೆದಿದೆ ಎನ್ನಲಾದ ಬೆಡ್ ಬ್ಲಾಕಿಂಗ್ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೊರೋನಾ ವಾರ್ ರೂಂನಲ್ಲಿ ನಡೆದಿದೆ ಎನ್ನಲಾದ ಬೆಡ್ ಬ್ಲಾಕಿಂಗ್ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆಂದು ತಿಳಿದುಬಂದಿದೆ. 

ಪ್ರಕರಣ ಸಂಬಂಧ ಪೊಲೀಸರು 18 ಮಂದಿಯನ್ನು ವಶಕ್ಕೆ ಪಡೆದಿದ್ದು ಶುಕ್ರವಾರ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ವಾರ್ ರೂಂನ ಉಸ್ತುವಾರಿ ವೈದ್ಯರು, ಖಾಸಗಿ ಆಸ್ಪತ್ರೆಯ ನೌಕರರು ಹಾಗೂ ಆ್ಯಂಬುಲೆನ್ಸ್ ಆ್ಯಪ್'ನ ನಿರ್ವಹಣೆ ಸಿಬ್ಬಂದಿ ಸೇರಿದಂತೆ 18 ಮಂದಿಯನ್ನು ಪ್ರಶ್ನಿಸಿ ಹೇಳಿಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. 

ಅಲ್ಲದೆ, ವಾರ್ ರೂಂನ ಸಿಸಿಟಿವಿ ಕ್ಯಾಮೆರಾಗಳನ್ನೂ ವಶಕ್ಕೆ ಪಡೆದು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈಗಾಗಲೇ ವಶಕ್ಕೆ ಪಡೆದಿರುವ ನಾಲ್ವರು ಆರೋಪಿಗಳು ನೀಡಿದ ಮಾಹಿತಿ ಆಧಾರದ ಮೇಲೆ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚಲಾಗಿದೆ. ಶೀಘ್ರದಲ್ಲೇ ಆತನನ್ನು ಬಂಧನಕ್ಕೊಳಪಡಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com