10 ಪಟ್ಟು ಹೆಚ್ಚು ಬೆಲೆಗೆ ಆಕ್ಸಿಜನ್ ಸಿಲಿಂಡರ್ ಕಾಳಸಂತೆಯಲ್ಲಿ ಮಾರಾಟ: ಸಿಸಿಬಿ ಪೊಲೀಸರಿಂದ ಓರ್ವನ ಬಂಧನ

ಕೊರೋನಾ ಸಂಕಷ್ಟ ಸಮಯದಲ್ಲಿ ವೈದ್ಯಕೀಯ ಔಷಧಿಗಳನ್ನು, ಆಕ್ಸಿಜನ್ ನ್ನು ಅಧಿಕ ಬೆಲೆಗೆ ಕಾಳಸಂತೆಯಲ್ಲಿ ಮಾರಾಟ ಮಾಡಿ ಹಣ ಮಾಡಿಕೊಳ್ಳುವವರ ದಂಧೆ ಮುಂದುವರಿದೇ ಇದೆ.
ಸಿಸಿಬಿ ಪೊಲೀಸರು
ಸಿಸಿಬಿ ಪೊಲೀಸರು

ಬೆಂಗಳೂರು: ಕೊರೋನಾ ಸಂಕಷ್ಟ ಸಮಯದಲ್ಲಿ ವೈದ್ಯಕೀಯ ಔಷಧಿಗಳನ್ನು, ಆಕ್ಸಿಜನ್ ನ್ನು ಅಧಿಕ ಬೆಲೆಗೆ ಕಾಳಸಂತೆಯಲ್ಲಿ ಮಾರಾಟ ಮಾಡಿ ಹಣ ಮಾಡಿಕೊಳ್ಳುವವರ ದಂಧೆ ಮುಂದುವರಿದೇ ಇದೆ.

ಇಂತಹ ಪ್ರಕರಣವೊಂದನ್ನು ಭೇದಿಸಿರುವ ಸಿಸಿಬಿ ಪೊಲೀಸರು ಮಾರುಕಟ್ಟೆ ದರಕ್ಕಿಂತ 10 ಪಟ್ಟು ಹೆಚ್ಚು ಬೆಲೆಗೆ ಆಕ್ಸಿಜನ್ ಸಿಲಿಂಡರ್ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.

ಸಾರ್ವಜನಿಕರಿಂದ ಸಿಕ್ಕಿದ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಪೀಣ್ಯದ ಆಕ್ಸಿಜನ್ ಘಟಕದ ಮೇಲೆ ದಾಳಿ ಮಾಡಿ ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಾಟ ಮಾಡುತ್ತಿದ್ದವರನ್ನು ಬಂಧಿಸಿದ್ದಾರೆ.

ಹೆಚ್ಚಿನ ವಿಚಾರಣೆ ನಡೆಯುತ್ತಿದೆ, ಆಮ್ಲಜನಕ ಸಿಲಿಂಡರ್, ರೆಮೆಡಿಸಿವಿರ್ ನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ಬಗ್ಗೆ ಪತ್ತೆಯಾದರೆ ಸಾರ್ವಜನಿಕರು ಮಾಹಿತಿ ಹಂಚಿಕೊಳ್ಳುವಂತೆ ನಗರ ಅಪರಾಧ ದಳದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com