45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಲಸಿಕೆ ನೀಡಲು ಆದ್ಯತೆ: ಸಚಿವ ಡಾ. ಸುಧಾಕರ್

ರಾಜ್ಯದಲ್ಲಿ ಲಭವಿರುವ ಕೋವಿಶೀಲ್ಡ್‌ ಲಸಿಕೆಯಲ್ಲಿ ಶೇ.70 ರಷ್ಟು ಲಸಿಕೆಯನ್ನು 2ನೇ ಡೋಸ್‌ ಹಾಕಿಸಿಕೊಳ್ಳಲು ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ಶನಿವಾರ ಹೇಳಿದ್ದಾರೆ.
ಸಚಿವ ಸುಧಾಕರ್
ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಲಭವಿರುವ ಕೋವಿಶೀಲ್ಡ್‌ ಲಸಿಕೆಯಲ್ಲಿ ಶೇ.70 ರಷ್ಟು ಲಸಿಕೆಯನ್ನು 2ನೇ ಡೋಸ್‌ ಹಾಕಿಸಿಕೊಳ್ಳಲು ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ಶನಿವಾರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ‘ಕೋವಿಶೀಲ್ಡ್‌ ಲಸಿಕೆಯಲ್ಲಿ ಶೇ.30 ರಷ್ಟನ್ನು 45 ವರ್ಷ ಮೇಲ್ಪಟ್ಟವರಿಗೆ 1ನೇ ಡೋಸ್‌ ನೀಡಲು ಬಳಸಲಾಗುತ್ತದೆ’ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ಲಭ್ಯವಿರುವ ಕೋವಿಶೀಲ್ಡ್ ಲಸಿಕೆಯಲ್ಲಿ 70%ರಷ್ಟನ್ನು 2ನೇ ಡೋಸ್ ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ಮೇರೆಗೆ ನೀಡಲಾಗುವುದು. ಉಳಿದ 30% ಲಸಿಕೆಯನ್ನು 45 ವರ್ಷ ಮೇಲ್ಪಟ್ಟವರಿಗೆ 1ನೇ ಡೋಸ್ ನೀಡಲು ಬಳಸಲಾಗುವುದು. ಕೋವ್ಯಾಕ್ಸಿನ್ ಲಸಿಕೆಯನ್ನು 2ನೇ ಡೋಸ್ ಬಾಕಿ ಇರುವ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com