ಈ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಕೊರೋನಾ ಪರೀಕ್ಷಾ ವರದಿ ಅಗತ್ಯವಿಲ್ಲ!

ಮಹಾರಾಷ್ಟ್ರ, ಕೇರಳ, ಪಂಜಾಬ್, ಚಂಡೀಗಢದಿಂದ ವಿಮಾನದ ಮೂಲಕ ರಾಜ್ಯಕ್ಕೆ ಆಗಮಿಸುವ ರೋಗ ಲಕ್ಷಣವುಳ್ಳ ಪ್ರಯಾಣಿಕರು ಮಾತ್ರ ಆರ್'ಟಿ-ಪಿಸಿಆರ್ ನೆಗೆಟಿವ್ ನರದಿ ತರಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಹಾರಾಷ್ಟ್ರ, ಕೇರಳ, ಪಂಜಾಬ್, ಚಂಡೀಗಢದಿಂದ ವಿಮಾನದ ಮೂಲಕ ರಾಜ್ಯಕ್ಕೆ ಆಗಮಿಸುವ ರೋಗ ಲಕ್ಷಣವುಳ್ಳ ಪ್ರಯಾಣಿಕರು ಮಾತ್ರ ಆರ್'ಟಿ-ಪಿಸಿಆರ್ ನೆಗೆಟಿವ್ ನರದಿ ತರಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. 

ಈ ಹಿಂದೆ ಈ ನಾಲ್ಕು ರಾಜ್ಯಗಳಿಂದ ಆಗಮಿಸುವವರು ರಾಜ್ಯಕ್ಕೆ ಆಗಮಿಸುವಾಗ 72 ಗಂಟೆಗಿಂತ ಹಳೆಯದಲ್ಲದ ಕೊರೋನಾ ನೆಗೆಟಿವ್ ವರದಿ ತರುವುದನ್ನು ಕಡ್ಡಾಯ ಮಾಡಲಾಗಿತ್ತು. ಈ ನಿಯಮವನ್ನು ಸಡಿಲಿಸುತ್ತಿದ್ದು, ಪ್ರತಿಯೊಬ್ಬರೂ ಆರ್'ಟಿಪಿಸಿಆರ್ ನೆಗೆಟಿವ್ ವರದಿ ತರುವ ಅಗತ್ಯವಿಲ್ಲ. 

ಆದರೆ, ರೋಗ ಲಕ್ಷಣಗಳುಳ್ಳವರು ಮಾತ್ರ ನೆಗೆಟಿವ್ ವರದಿ ತರಬೇಕು. ವಿಮಾನ ನಿಲ್ದಾಣದ ಸಿಬ್ಬಂದಿ ಇದನ್ನು ಪರಿಶೀಲನೆ ನಡೆಸಬೇಕು. ಈ ಮೂಲಕ ರೋಗ ಹರಡದಂತೆ ತಡೆಯಲು ಕ್ರಮ ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com