ಕಾಳಸಂತೆಯಲ್ಲಿ ಅಕ್ರವಾಗಿ ಆಕ್ಸಿಜನ್ ಸಿಲಿಂಡರ್ ಮಾರಾಟ: ಆರೋಪಿ ಸೆರೆ

ಅಕ್ರಮವಾಗಿ ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್‌ಗಳನ್ನು ಮಾರಾಟ ಮಾರುತ್ತಿದ್ದ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಬಂಧಿತ ರವಿ ಕುಮಾರ್
ಬಂಧಿತ ರವಿ ಕುಮಾರ್

ಬೆಂಗಳೂರು: ಅಕ್ರಮವಾಗಿ ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್‌ಗಳನ್ನು ಮಾರಾಟ ಮಾರುತ್ತಿದ್ದ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಪೀಣ್ಯದ ಸೀಗಾ ಗ್ಯಾಸ್ ಖಾಸಗಿ ಏಜೆನ್ಸಿಯ ಸೂಪರ್ ವೈಸರ್ ರವಿಕುಮಾರ್ (36 ವರ್ಷ) ಬಂಧಿತ ಆರೋಪಿಯಾಗಿದ್ದಾನೆ. ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನ್‌ಗೆ ಅಭಾವ ಉಂಟಾಗಿರುವ ಲಾಭ ಮಾಡಿಕೊಂಡು ದುಬಾರಿ ಬೆಲೆಗೆ ಆಕ್ಸಿಜನ್ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ಮಾರುತ್ತಿದ್ದ  ಆರೋಪಿಯು ಮಾರಾಟ ಮಾಡುತ್ತಿದ್ದ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಗ್ಯಾಸ್ ಏಜೆನ್ಸಿಯಿಂದ ಆರೋಪಿಯು 300 ರೂ. ಬೆಲೆಯ 47 ಲೀಟರ್‌ನ ಒಂದು ಸಿಲಿಂಡರ್ ಅನ್ನು 3 ಸಾವಿರಕ್ಕೆ ಮಾರಾಟ ಮಾಡುತ್ತಿದ್ದ. ಸಾರ್ವಜನಿಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾಗಲೇ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಪೀಣ್ಯ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಬಂಧಿತ ಆರೋಪಿ ರವಿಕುಮಾರ್ ಪೀಣ್ಯ ನಿವಾಸಿಯಾಗಿದ್ದು, 10 ವರ್ಷಗಳ ಹಿಂದೆ ಕಂಪನಿಗೆ ಕೆಲಸಕ್ಕೆ ಸೇರಿದ್ದರು. ಅಕ್ರಮ ಆಕ್ಸಿಜನ್ ಸಿಲಿಂಡರ್ ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ಖಚಿತ ಮಾಹಿತಿ ಆಧರಿಸಿ ಮಫ್ತಿಯಲ್ಲಿ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಗ್ರಾಹಕರ ಸೋಗಿನಲ್ಲಿ ತೆರಳಿ ರೆಡ್ ಹ್ಯಾಂಡ್ ಆಗಿ  ಸೆರೆ ಹಿಡಿದಿದ್ದಾರೆ. 47 ಲೀಟರ್ ಆಕ್ಸಿಜನ್ ಸಿಲಿಂಡರ್ ಗೆ ಸರ್ಕಾರದ 300 ರೂಗಳಾಗಿದ್ದು, ರವಿಕುಮಾರ್ ಇದನ್ನು 3000 ರೂಗಳಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಅದರಂತೆ ರವಿ ಕುಮಾರ್ ವಿರುದ್ಧ ಡ್ರಗ್ ಕಂಟ್ರೋಲ್ ಆಕ್ಟ್ ಮತ್ತು ಅಗತ್ಯ ಸರಕುಗಳ ಕಾಯ್ದೆಯಡಿಸ ದೂರು ದಾಖಲಿಸಿಕೊಂಡು  ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಆತನ ವ್ಯವಹಾರದ ವಿವರಗಳನ್ನು ಪರಿಶೀಲಿಸಲು ಪೊಲೀಸರು ಆತನ ಬ್ಯಾಂಕ್ ಖಾತೆಯನ್ನು ಕೂಡ ವಶಪಡಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com