ಕೋವಿಡ್-19: ಸೋಂಕಿತರ ಆಸ್ಪತ್ರೆ ದಾಖಲು, ಸ್ಥಳಾಂತರ, ಡಿಸ್ಚಾರ್ಜ್ ಕುರಿತು ಹೊಸ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಕೊರೋನಾ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು, ಸ್ಥಳಾಂತರ ಮಾಡಲು ಹಾಗೂ ಆಸ್ಪತ್ರೆಗಳಿಂದ ಬಿಡುಗಡೆ ಮಾಡುವ ಕುರಿತು ರಾಜ್ಯ  ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು, ಸ್ಥಳಾಂತರ ಮಾಡಲು ಹಾಗೂ ಆಸ್ಪತ್ರೆಗಳಿಂದ ಬಿಡುಗಡೆ ಮಾಡುವ ಕುರಿತು ರಾಜ್ಯ  ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. 

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಾಂಕ್ರಾಮಿಕ ರೋಗ ನಿರ್ವಹಣೆಗೆ ಆಸ್ಪತ್ರೆಗಳ ಹಾಸಿಗೆಗಳು ಅತ್ಯಮೂಲ್ಯವಾಗಿದೆ. ಆದ್ದರಿಂದ ಕೊರೋನಾ ಸೋಂಕಿನಿಂದ ಗಂಭೀರ ಸ್ಥಿತಿಯಲ್ಲಿರುವವರಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ತೊಂದರೆ ಎದುರಿಸುವುದನ್ನು ತಪ್ಪಿಸಲು ಯಾರಿಗೆ, ಎಲ್ಲಿ ಚಿಕಿತ್ಸೆ ನೀಡಬೇಕೆಂಬ ಬಗ್ಗೆ ಹೊಸಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದೆ. 

ಹೊಸ ಮಾರ್ಗಸೂಚಿ ಹಿನ್ನೆಲೆಯಲ್ಲಿ ಕೋವಿಡ್-19 ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗುವ ರೋಗಿಗಳು ಇನ್ನು ಮುಂದೆ ಸರ್ಕಾರದ ಸರ್ಕಾರದ ಆದೇಶಗಳನ್ನು ಪಾಲನೆ ಮಾಡಬೇಕಿದೆ.

ಕೋವಿಡ್ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ದಾಖಲಾಗಿರುವವರ ಆರೋಗ್ಯ ಸ್ಥಿತಿ ಉತ್ತಮಗೊಳ್ಳುತ್ತಿದ್ದಂತೆಯೇ ಅವರನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಿ ತಾತ್ಕಾಲಿಕ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಿಸಬೇಕೆಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. 

ಯಾವುದೇ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಕ್ಕೂ ಮುನ್ನ ರಾಜ್ಯ ಸರ್ಕಾರ ಹೊರಡಿಸಿರುವ ಡಿಸ್ಚಾರ್ಜ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಎಸ್ಎಎಸ್'ಟಿ ಅಡಿಯಲ್ಲಿ ಸರ್ಕಾರಿ ಆಸ್ಪತ್ರೆಗಳಿಂದ ಶಿಫಾರಸುಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದವರಿಗೂ ಇದೇ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com