ಕೊರೋನಾ ಪರಿಸ್ಥಿತಿ ನಿಭಾಯಿಸಲು ಮತ್ತಷ್ಟು ಬೆಂಬಲ ನೀಡುವುದಾಗಿ ಕೇಂದ್ರ ಭರವಸೆ ನೀಡಿದೆ: ಸಚಿವ ಬೊಮ್ಮಾಯಿ
ರಾಜ್ಯದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಹೆಚ್ಚಾಗಿದ್ದು, ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಮತ್ತಷ್ಟು ಬೆಂಬಲ ನೀಡುವ ಭರವಸೆ ನೀಡಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.
Published: 11th May 2021 07:24 AM | Last Updated: 11th May 2021 07:24 AM | A+A A-

ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಹೆಚ್ಚಾಗಿದ್ದು, ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಮತ್ತಷ್ಟು ಬೆಂಬಲ ನೀಡುವ ಭರವಸೆ ನೀಡಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.
ನಿನ್ನೆಯಷ್ಟೇ ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡಿದ್ದ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದ ಪರಿಸ್ಥಿತಿ ವಿವರಿಸಿದ್ದಾರೆಂದು ತಿಳಿದುಬಂದಿದೆ.
ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ ನಿರ್ವಹಿಸಲು ಕೈಗೊಳ್ಳಲಾಗಿರುವ ಎಲ್ಲಾ ಕ್ರಮಗಳನ್ನು ವಿವರಿಸಲಾಗಿದೆ. ರಾಜ್ಯದ ಪರಿಸ್ಥಿತಿಗೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದ್ದು, ರಾಜ್ಯಕ್ಕೆ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದ್ದಾರೆ. ಅಲ್ಲದೆ, ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳಿಗೆ ಕೇಂದ್ರ ಸರ್ಕಾರ ಸಂತೃಪ್ತಿ ವ್ಯಕ್ತಪಡಿಸಿದೆ ಎಂದು ಹೇಳಿದ್ದಾರೆ.
ಆಕ್ಸಿಜನ್, ಜಿಲ್ಲೆಗಳಿಗೆ ಅಕ್ಸಿಜನ್ ಸರಬರಾಜು ಮಾಡಲು ಟ್ಯಾಂಕರ್ ಗಳು ಸೇರಿದಂತೆ ರಾಜ್ಯಕ್ಕೆ ಅಗತ್ಯವಿರುವ ಎಲ್ಲಾ ಅವಶ್ಯಕತೆಗಳನ್ನೂ ಕೇಂದ್ರಕ್ಕೆ ತಿಳಿಸಲಾಗಿದೆ. ರಾಜ್ಯವೊಂದಕ್ಕೆ 965 ಎಂಟಿ ಆಕ್ಸಿಜನ್ ನೀಡಿರುವ ಹಿನ್ನೆಲೆಯಲ್ಲಿ ಇತರೆ ರಾಜ್ಯಗಳಿಗೂ ಆಕ್ಸಿಜನ್ ಪೂರೈಕೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಲಾಗಿದೆ. ಈ ವೇಳೆ ಕೇಂದ್ರ ಸರ್ಕಾರ ಮತ್ತಷ್ಟು ಆಕ್ಸಿಜನ್ ಹಾಗೂ ಟ್ಯಾಂಕರ್ ಗಳನ್ನು ನೀಡುವ ಭರವಸೆ ನೀಡಿದೆ ಎಂದು ತಿಳಿಸಿದ್ದಾರೆ.
ಭಾನುವಾರ ಕೇಂದ್ರ ಸರ್ಕಾರ ನಾಲ್ಕು ಟ್ಯಾಂಕರ್ ಗಳನ್ನು ನೀಡಿದೆ. ಇನ್ನು 10 ಟ್ಯಾಂಕರ್ ಗಳನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ಕೇಂದ್ರ ಸಚಿವರು ತಿಳಿಸಿದ್ದಾರೆಂದಿದ್ದಾರೆ.