ರಾಜ್ಯದಲ್ಲಿ ಲಾಕ್ಡೌನ್ ಅವಧಿಗೆ ಯಾವುದೇ ವಿಶೇಷ ಪ್ಯಾಕೇಜ್ ಘೋಷಿಸುವ ಚಿಂತನೆ ಇಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

ರಾಜ್ಯದಲ್ಲಿ ಲಾಕ್ಡೌನ್ ಅವಧಿಗೆ ಯಾವುದೇ ವಿಶೇಷ ಪ್ಯಾಕೇಜ್ ಘೋಷಿಸುವ ಚಿಂತನೆ ಇಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಅವಧಿಗೆ ಯಾವುದೇ ವಿಶೇಷ ಪ್ಯಾಕೇಜ್ ಘೋಷಿಸುವ ಚಿಂತನೆ ಇಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ,ಲಾಕ್ಡೌನ್ ಅವಧಿಗೆ ಸರ್ಕಾರ ನೆರೆಯ ರಾಜ್ಯಗಳಲ್ಲಿ ಘೋಷಿಸಿರುವಂತೆ ಕರ್ನಾಟಕದಲ್ಲಿ ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತಹ ಯಾವುದೇ ಚಿಂತನೆ ಇಲ್ಲವೆಂದು ಹೇಳಿದ್ದಾರೆ. 

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ. ಆದರೆ, ನಮ್ಮ ರಾಜ್ಯ ಇಡೀ ದೇಶದಲ್ಲೇ ಅತೀ ಹೆಚ್ಚು ಸೋಂಕು ಪ್ರಕರಣ ಹೊಂದಿದೆ. ಹಾಗಾಗಿ, ಜನರು ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಬೆಳಗ್ಗೆ 6 ರಿಂದ 10 ರವರೆಗೆ ಮಾತ್ರ ಓಡಾಡಬೇಕು. ಪೊಲೀಸರಿಗೆ ಲಾಠಿ ಬೀಸಲು, ವಾಹನ ಸೀಜ್ ಮಾಡಲು ಅವಕಾಶ ನೀಡಬಾರದು. ಜನರ ಸಹಕಾರ ಇದ್ದಾಗ ಮಾತ್ರ ಸೋಂಕು ನಿಯಂತ್ರಣ ಸಾಧ್ಯ ಎಂದು ಮನವಿ ಮಾಡಿದರು.

ಇದೇ ವೇಳೆ ದೆಹಲ ಭೇಟಿ ಕೊಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನೇಕೆ ದೆಹಲಿಗೆ ಹೋಗಲಿ? ಮೊನ್ನೆಯಷ್ಟೇ ಸಚಿವ ಬಸವರಾಜ್​​ ಬೊಮ್ಮಾಯಿ‌ ಹೋಗಿ ಬಂದಿದ್ದಾರೆ. ರಾಜ್ಯಕ್ಕೆ ಬೇಕಾದ ಸಹಕಾರ ಕೇಳಿ ಬಂದಿದ್ದಾರೆ ಎಂದು ತಿಳಿಸಿದರು.

ಕೇಂದ್ರ ನಾಯಕರ ಜೊತೆ ಸಂಪರ್ಕದಲ್ಲಿದ್ದೇನೆ. ಸ್ವತಃ ಪ್ರಧಾನಿ ಮೋದಿಯವರ ಜೊತೆಯೇ ಮಾತನಾಡಿದ್ದೇನೆ. ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ದೆಹಲಿಗೆ ಹೋಗುವ ಅವಶ್ಯಕತೆಯಿಲ್ಲ. ಕೇಂದ್ರದಿಂದ ಎಲ್ಲಾ ಸಹಕಾರ ಸಿಗುತ್ತಿದೆ. ಜೆಮ್‌ಶೆಡ್‌ಪುರದಿಂದ ಆಕ್ಸಿಜನ್ ಬಂದಿದೆ. ಸ್ವತಃ ಪ್ರಧಾನಿಯವರೇ ನನ್ನ ಜೊತೆ ಮಾತನಾಡಿದ್ದಾರೆ. ಕೇಂದ್ರದಿಂದ ಎಲ್ಲ ಸಹಕಾರ ಕೊಡುತ್ತಿದ್ದಾರೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com