ಲಾಕ್ ಡೌನ್ ಅವಧಿಗೆ ಇಂದಿರಾ ಕ್ಯಾಂಟೀನ್ ತೆರೆದ ರಾಜ್ಯ ಸರ್ಕಾರ; ಆಹಾರ ಉಚಿತ!

ಕೆಲವು ತಿಂಗಳ ಹಿಂದೆ ಸರ್ಕಾರ ಸ್ಥಗಿತಗೊಳಿಸಿದ್ದ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಬಡವರಿಗೆ ಕೂಲಿಕಾರ್ಮಿಕರಿಗೆ ಕಡಿಮೆ ಹಣಕ್ಕೆ ಊಟ ಉಪಹಾರ ಸಿಗಲೆಂದು ತೆರೆದಿದ್ದ ಸಿದ್ದರಾಮಯ್ಯರ ಮಹತ್ವಾಕಾಂಕ್ಷಿ 'ಇಂದಿರಾ ಕ್ಯಾಂಟೀನ್' ಅನ್ನು ಇದೀಗ ಲಾಕ್ಡೌನ್ ಅವಧಿಗೆ ಮತ್ತೆ ತೆರೆದಿದೆ.
ಇಂದಿರಾ ಕ್ಯಾಂಟೀನ್
ಇಂದಿರಾ ಕ್ಯಾಂಟೀನ್

ಬೆಂಗಳೂರು: ಕೆಲವು ತಿಂಗಳ ಹಿಂದೆ ಸರ್ಕಾರ ಸ್ಥಗಿತಗೊಳಿಸಿದ್ದ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಬಡವರಿಗೆ ಕೂಲಿಕಾರ್ಮಿಕರಿಗೆ ಕಡಿಮೆ ಹಣಕ್ಕೆ ಊಟ ಉಪಹಾರ ಸಿಗಲೆಂದು ತೆರೆದಿದ್ದ ಸಿದ್ದರಾಮಯ್ಯರ ಮಹತ್ವಾಕಾಂಕ್ಷಿ 'ಇಂದಿರಾ ಕ್ಯಾಂಟೀನ್' ಅನ್ನು ಇದೀಗ ಲಾಕ್ಡೌನ್ ಅವಧಿಗೆ ಮತ್ತೆ ತೆರೆದಿದೆ.

ಕೋವಿಡ್ 19 ವೈರಾಣುವಿನ ಹರಡುವಿಕೆಯನ್ನು ತಡೆಗಟ್ಟಲು ಮೇ 10 ರಿಂದ 24ರವರೆಗೆ ರಾಜ್ಯದಲ್ಲಿ ಲಾಕ್ಡೌನ್ ಘೋಷಿಸಿದ್ದು, ಇದರಿಂದ ಬಡವರಿಗೆ ಕೂಲಿಕಾರ್ಮಿಕರಿಗೆ ಆಹಾರ ಸಿಗದೇ ಕಷ್ಟಪಡುವಂತಾಗಿದೆ. ಹೀಗಾಗಿ ಈ ಲಾಕ್ಡೌನ್ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತವಾಗಿ ಆಹಾರವನ್ನು ಒದಗಿಸುವಂತೆ ಸರ್ಕಾರ ಆದೇಶಿಸಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ ರವರ ಅಧ್ಯಕ್ಷತೆಯಲ್ಲಿ ನಿರಾಶ್ರಿತರಿಗೆ  ಆಹಾರ ಪದಾರ್ಥಗಳ ಕಿಟ್‌ಗಳನ್ನು ನೀಡುವ ಸಂಬಂಧ ವೀಡಿಯೋ ಸಂವಾದ ನಡೆಸಿದ್ದರು. ಅದರಂತೆ ಈ ಲಾಕ್ಡೌನ್ ಅವಧಿಯವರೆಗೆ ಬಿಬಿಎಂಪಿ ವ್ಯಾಪ್ತಿಯನ್ನು ಹೊರತುಪಡಿಸಿ ಇತರೆ ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿನ ಕೂಲ ಕಾರ್ಮಿಕರು, ವಲಸಿಗರು ಮತ್ತು ಇತರೇ ದುರ್ಬಲ ವರ್ಗದವರಿಗೆ ಅನಾನುಕೂಲವಾಗದಂತೆ ಈ ವ್ಯವಸ್ಥೆ ಮಾಡಲಾಗಿದೆ ಎಂದರು. 

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಚಾಲ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತವಾಗಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟಗಳನ್ನು ನೀಡುವಂತೆ ನಿರ್ದೇಶಿಸಲಾಗಿದೆ. 

ಇಂದಿರಾ ಕ್ಯಾಂಟೀನ್‌ಗಳಲ್ಲಿ ಪ್ರಚಲಿತ ಮಾರ್ಗಸೂಚಿಗಳನ್ನಯ ಉಚಿತವಾಗಿ ಬೆಳಗಿನ ಉಪಹಾರ , ಮಧ್ಯಾಹ್ನ ಹಾಗೂ ರಾತ್ರಿ ಆಟಗಳನ್ನು ಒದಗಿಸಲು ಅಗತ್ಯ ಕ್ರಮವಹಿಸಲು ನಿರ್ದೇಶಿಸಿದೆ . ಈ ನಿಟ್ಟಿನಲ್ಲಿ ಆಹಾರ ಸೇವಿಸುವ ಜನರ ಸಂಖ್ಯೆ ವಿವರಗಳನ್ನು ಕಡ್ಡಾಯವಾಗಿ ಯೋಜನಾ ನಿರ್ದೇಶಕರು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಪರಿವೀಕ್ಷಣೆ ಮಾಡಬೇಕು. ನಿಗಧಿಪಡಿಸಲಾಗಿರುವ ಅಗತ್ಯ ಕ್ರಮಗಳನ್ನು ಯಾವುದೇ ಲೋಪಗಳಲ್ಲದೆ ಕೈಗೊಳ್ಳುವಂತೆ ಎಂದು ಪೌರಾಡಳಿತ ಇಲಾಖೆ ನಿರ್ದೇಶಕರು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com