ಲಾಕ್ ಡೌನ್ ವೇಳೆ ಪೊಲೀಸರು ಸಂಯಮದಿಂದ ಇರಬೇಕು, ಜನರೂ ನಿಯಮ ಪಾಲಿಸಬೇಕು: ಹೈಕೋರ್ಟ್

ಕೊರೋನಾ ಮಾರ್ಗಸೂಚಿಗಳು ಮತ್ತು ಲಾಕ್ಡೌನ್ ಯಶಸ್ವಿಯಗೊಳಿಸಲು ಸಾರ್ವಜನಿಕರ ಮೇಲೆ ಅನಗತ್ಯ ಬಲ ಪ್ರಯೋಗ ಮಾಡುವ ಅಗತ್ಯವಿಲ್ಲ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ ಮಾರ್ಗಸೂಚಿಗಳು ಮತ್ತು ಲಾಕ್ಡೌನ್ ಯಶಸ್ವಿಯಗೊಳಿಸಲು ಸಾರ್ವಜನಿಕರ ಮೇಲೆ ಅನಗತ್ಯ ಬಲ ಪ್ರಯೋಗ ಮಾಡುವ ಅಗತ್ಯವಿಲ್ಲ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. 

ಕೊರೋನಾ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವೋ ಹಲವು ಸಾರ್ವಜನಿಕ ಹಿತಾಸಕ್ತಿ ಅಱ್ಜಿಗಳ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ನ್ಯಾ.ಅರವಿಂದ ಕುಮಾರ್ ಅವರಿದ್ದ ಪೀಠ ಈ ಸೂಚನೆ ನೀಡಿದೆ. 

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಪೊಲೀಸರು ಸಾರ್ವಜನಿಕರ ಮೇಲೆ ಅನಗತ್ಯವಾಗಿ ಬಲ ಪ್ರಯೋಗ ಮಾಡುತ್ತಿದ್ದಾರೆಂದು ನ್ಯಾಯಪೀಠಕ್ಕೆ ತಿಳಿಸಿದರು. 

ಮಾರ್ಗಸೂಚಿಗಳನ್ನು ಜಾರಿ ಮಾಡುವ ವೇಳೆ ಅನಗತ್ಯ ಬಲಪ್ರಯೋಗ ಮಾಡಬಾರದು ಎಂದು ಸರ್ಕಾರ ಪೊಲೀಸರಿಗೆ ನಿರ್ದೇಶಿಸಬೇಕು. ಲಾಕ್'ಡೌನ್ ಸಂದರ್ಭದಲ್ಲಿ ಪೊಲೀಸರು ಸಂಯಮದಿಂದ ಇರಬೇಕು. ಜನರೂ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಹೇಳಿದೆ. ಅಲ್ಲದೆ, ಮುಂದಿನ ವಿಚಾರಣೆ ವೇಳೆ ನ್ಯಾಯಪೀಠಕ್ಕೆ ವಿವರಣೆ ನೀಡಬೇಕು ಎಂದು ಸೂಚಿಸಿ ಮೇ.13ಕ್ಕೆ ವಿಚಾರಣೆ ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com