ಹಾಸಿಗೆ ಬಿಟ್ಟು ಕೊಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ: ಗೌರವ್ ಗುಪ್ತ

ಬಿಬಿಎಂಪಿಯ ಪ್ರತಿ ವಲದಲ್ಲಿರುವ ಸಣ್ಣ ಆಸ್ಪತ್ರೆಗಳ ಮೇಲೆ ನಿಗಾ ವಹಿಸಲು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ನೋಡಲ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. 

Published: 12th May 2021 07:39 AM  |   Last Updated: 12th May 2021 07:39 AM   |  A+A-


Gourav Gupta

ಗೌರವ್ ಗುಪ್ತ

Posted By : Shilpa D
Source : The New Indian Express

ಬೆಂಗಳೂರು:  ಬಿಬಿಎಂಪಿಯ ಪ್ರತಿ ವಲದಲ್ಲಿರುವ ಸಣ್ಣ ಆಸ್ಪತ್ರೆಗಳ ಮೇಲೆ ನಿಗಾ ವಹಿಸಲು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ನೋಡಲ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. 

ಆಸ್ಪತ್ರೆಗಳಲ್ಲಿ ಸರ್ಕಾರಿ ಕೋಟಾದಡಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್‌ ರೋಗಿಗಳ ಆರೋಗ್ಯ ಸ್ಥಿತಿ ಬಗ್ಗೆ ಸಂಬಂಧಿಕರಿಗೆ ಮಾಹಿತಿ ನೀಡಲು ಸಹಾಯ ಕೇಂದ್ರ ಆರಂಭಿಸಲು ಬಿಬಿಎಂಪಿ ಕ್ರಮ ಕೈಗೊಂಡಿದೆ. 

ಪ್ರತಿ ಆಸ್ಪತ್ರೆಗೂ ಜಲಮಂಡಳಿ ಹಾಗೂ ಬಿಬಿಎಂಪಿ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಆದೇಶ ಹೊರಡಿಸಿದ್ದಾರೆ. ಸಹಾಯಕೇಂದ್ರಗಳನ್ನು ಆರಂಭಿಸುವ ಹೊಣೆಯನ್ನು ಅವರಿಗೆ ವಹಿಸಲಾಗಿದೆ. ಸುವರ್ಣ ಆರೋಗ್ಯ ಟ್ರಸ್ಟ್‌ ಮೂಲಕ ಸರ್ಕಾರಿ ಕೋಟಾಕ್ಕೆ ಹಂಚಿಕೆ ಆಗಿರುವ ಆಸ್ಪತ್ರೆಗಳಲ್ಲಿ ಬಿಬಿಎಂಪಿ ಸೂಚಿಸಿದ ರೋಗಿಗಳೇ ದಾಖಲಾಗುವುದನ್ನು ಖಚಿತಪಡಿಸಿಕೊಳ್ಳಬೇಕು. ಅವರಿಗೆ ಸರಿಯಾದ ಚಿಕಿತ್ಸೆ ದೊರಕುವಂತೆ ನೋಡಿಕೊಂಡು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಎಂದೂ ಮುಖ್ಯ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳ ಹಾಸಿಗೆ ಹಂಚಿಕೆ ಮತ್ತು ಲಭ್ಯತೆ ಕುರಿತು ಅವರು ಮಂಗಳವಾರ ವರ್ಚುವಲ್‌ ರೂಪದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಸಭೆ ನಡೆಸಿದರು.  ಪಾಲಿಕೆ ವ್ಯಾಪ್ತಿಯ ಆಸ್ಪತ್ರೆಗಳು ಶೇ 50ರಷ್ಟು ಹಾಸಿಗೆಗಳನ್ನು ಕೋವಿಡ್‌ ಚಿಕಿತ್ಸೆಗಾಗಿ ಸರ್ಕಾರಕ್ಕೆ ಬಿಟ್ಟುಕೊಡದಿದ್ದರೆ ವಿಪತ್ತು ನಿರ್ವಹಣೆ ಕಾಯ್ದೆ ಅಡಿ ಕ್ರಮ ಕೈಗೊಳ್ಳಬೇಕು’  ಆರ್‌.ಅಶೋಕ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ‘ಆಸ್ಪತ್ರೆಗಳ ಸಹಕಾರ ಪಡೆದು ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಹೆಚ್ಚಿಸಬೇಕು. ಅವುಗಳಲ್ಲಿ ಸದ್ಯ 960 ಹಾಸಿಗೆಗಳಿವೆ. ಈ  ಸಾಮರ್ಥ್ಯವನ್ನು 5 ಸಾವಿರ ಹಾಸಿಗೆಗಳಿಗೆ ಹೆಚ್ಚಿಸಬೇಕು’ ಎಂದರು.  ‘ಬಿಬಿಎಂಪಿ ಅಧಿಕಾರಿಗಳು, ನೋಡಲ್‌ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳ ನೇತೃತ್ವದ ತಂಡವು ಶೀಘ್ರವೇ ಎಲ್ಲ ಆಸ್ಪತ್ರೆಗಳಿಗೆ ಭೇಟಿ ನೀಡಿ ಹಾಸಿಗೆಗಳ ಲಭ್ಯತೆಯ ವಾಸ್ತವಾಂಶ ಪರಿಶೀಲಿಸಬೇಕು’ ಎಂದರು. 

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ‘ಎಲ್ಲ ಖಾಸಗಿ ಆಸ್ಪತ್ರೆಗಳು ಶೇ 50ರಷ್ಟು ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳು ಶೇ 75ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದಡಿ ಚಿಕಿತ್ಸೆಗೆ ಮೀಸಲಿಡಬೇಕಿದೆ. ಇದರ ಉಸ್ತುವಾರಿಗೆ ವಲಯವಾರು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ 9 ತಂಡಗಳನ್ನು ರಚಿಸಲಾಗಿದೆ. 50 ಆಸ್ಪತ್ರೆಗಳಿಗೆ ನೋಡಲ್ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಆಪ್ತಮಿತ್ರ ಸಿಬ್ಬಂದಿಯನ್ನೂ ನೇಮಿಸಲಾಗಿದೆ’ ಎಂದರು.

ಎಲ್ಲಾ ಅರಣ್ಯ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರಿಗೆ ತಾಲ್ಲೂಕು ಕಚೇರಿಗಳಲ್ಲಿ ಲಸಿಕೆ ಹಾಕಲು ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಮೋಹನ್ ಅರಣ್ಯ ಸಚಿವ ಅರವಿಂದ್ ಲಿಂಬಾವಳಿ ಅವರಿಗೆ ಪತ್ರ ಬರೆದಿದ್ದಾರೆ. 


Stay up to date on all the latest ರಾಜ್ಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp