ಕೋವಿಡ್-19: ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಚಿಕಿತ್ಸಾ ಕೇಂದ್ರ ಸ್ಥಾಪನೆಗೆ ಬಿಬಿಎಂಪಿ ನಿರ್ಧಾರ

ಗಂಭೀರ ಸ್ಥಿತಿಗೆ ತಲುಪಿ ಕೊನೆ ಕ್ಷಣದಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ತಗ್ಗಿಸುವ ಸಲುವಾಗಿ ಕ್ರಮ ಕೈಗೊಳ್ಳಲು ಮುಂದಾಗಿರುವ ಬಿಬಿಎಂಪಿ ಅಧಿಕಾರಿಗಳು, ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಚಿಕಿತ್ಸಾ ಕೇಂದ್ರಗಳ ಸ್ಥಾಪನೆಗೆ ನಿರ್ಧರಿಸಿದೆ. 
ವರ್ಚುವಲ್ ಸಭೆಯಲ್ಲಿರುವ ಅಧಿಕಾರಿಗಳು
ವರ್ಚುವಲ್ ಸಭೆಯಲ್ಲಿರುವ ಅಧಿಕಾರಿಗಳು

ಬೆಂಗಳೂರು: ಗಂಭೀರ ಸ್ಥಿತಿಗೆ ತಲುಪಿ ಕೊನೆ ಕ್ಷಣದಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ತಗ್ಗಿಸುವ ಸಲುವಾಗಿ ಕ್ರಮ ಕೈಗೊಳ್ಳಲು ಮುಂದಾಗಿರುವ ಬಿಬಿಎಂಪಿ ಅಧಿಕಾರಿಗಳು, ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಚಿಕಿತ್ಸಾ ಕೇಂದ್ರಗಳ ಸ್ಥಾಪನೆಗೆ ನಿರ್ಧರಿಸಿದೆ. 

ಈ ಕುರಿತು ಮಾಹಿತಿ ನೀಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ಅವರು, ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಚಿಕಿತ್ಸಾ ಕೇಂದ್ರ ಸ್ಥಾಪನೆಗೆ ಸೂಚಿಸಲಾಗಿದೆ. ಈ ಕೇಂದ್ರಗಳು 24*7 ಕಾರ್ಯನಿರ್ವಹಿಸಲಿವೆ. ಮೂರು ಪಾಳಿಯಲ್ಲಿ ವೈದ್ಯಕೀಯ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. ಈ ಕೇಂದ್ರಗಳು ಹತ್ತಿರದಲ್ಲಿರುವ ಆಸ್ಪತ್ರೆಗಳನ್ನು ಸುಲಭವಾಗಿ ಸಂಪರ್ಕಿಸುವಂತಿರಲಿದೆ. ಚಿಕಿತ್ಸಾ ಕೇಂದ್ರಗಳಿಗೆ ತೆರಳುವ ರೋಗಿಗಳ ಸ್ಥಿತಿ ಗಂಭೀರವಾಗಿದ್ದರೆ, ಕೂಡಲೇ ಆಸ್ಪತ್ರೆಗೆ ದಾಖಲಿಸಲು ಇದು ಸಹಕಾರಿಯಾಗಿರಲಿದೆ ಎಂದು ಹೇಳಿದ್ದಾರೆ. 

ಪ್ರತೀ ಕೇಂದ್ರದಲ್ಲಿಯೂ ಪರೀಕ್ಷೆ ನಡೆಸಲು, ವೈದ್ಯಕೀಯ ಸಲಹೆಗಳನ್ನು ಪಡೆಯಲು ಸೌಲಭ್ಯ ಕಲ್ಪಿಸಲಾಗಿರುತ್ತದೆ. ಚಿಕಿತ್ಸಾ ಕೇಂದ್ರಕ್ಕೆ ಬರುವ ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರನ್ನು ಕೋವಿಡ್ ಕೇರ್ ಕೇಂದ್ರಕ್ಕೂ ಸ್ಥಳಾಂತರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

ಕೊರೊನಾ ಸೋಂಕಿತರಿಗೆ 10 ದಿನಗಳಿಗಿಂತ ಹೆಚ್ಚುವರಿ ಚಿಕಿತ್ಸೆ ಅವಶ್ಯಕತೆ ಇದ್ದರೆ, ಸುವರ್ಣ ಆರೋಗ್ಯ ಸುರಕ್ಷತಾ ಟ್ರಸ್ಟ್‌ ಪೋರ್ಟಲ್‌ನಲ್ಲಿ 5 ದಿನ ಹೆಚ್ಚುವರಿ ಚಿಕಿತ್ಸೆ ಅವಶ್ಯ ಎಂದು (ಐದು ದಿನ ಹೆಚ್ಚುವರಿ ಅವಶ್ಯ ಎಂದು ನಮೂದಿಸಿ) ಅರ್ಜಿ ಸಲ್ಲಿಸಬೇಕು. ಎಲ್ಲಾ ಆಸ್ಪತ್ರೆಗಳ ನೋಡಲ್‌ ಅಧಿಕಾರಿಗಳು ಮತ್ತು ಆರೋಗ್ಯ ಮಿತ್ರ ಸಿಬ್ಬಂದಿಯೊಂದಿಗೆ ಸಮನ್ವಯ ಸಾಧಿಸಬೇಕು ಎಂದು ಸೂಚಿಸಿದ್ದಾರೆ. 

ಆಸ್ಪತ್ರೆಗಳು ಪ್ರತಿ ಡಿಸ್ಚಾರ್ಜ್ ನ ಮಾಹಿತಿ ಕಡ್ಡಾಯವಾಗಿ ದಾಖಲಿಸಬೇಕು. ಒಂದೊಮ್ಮೆ ಹತ್ತು ದಿನಗಳ ನಂತರವೂ ಸೋಂಕಿತರ ಬಿಡುಗಡೆಯ ಬಗ್ಗೆ ನಿಖರ ಮಾಹಿತಿ ನೀಡದೆ ಇದ್ದರೆ, ನಿರ್ದಿಷ್ಟ ಹಾಸಿಗೆ ಖಾಲಿ ಇದೆ ಎಂದು ಪರಿಗಣಿಸಲಾಗುತ್ತದೆ. ಕೊರೋನಾ ಸೋಂಕಿನಿಂದ ಮೃತಪಟ್ಟವರ ಮಾಹಿತಿಯನ್ನು ಸಹ ತಡ ಮಾಡದೆ ಅಪ್‌ ಡೇಟ್‌ ಮಾಡಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com