ಗ್ರಾಮೀಣ ಭಾಗಗಳಲ್ಲಿ ಕೋವಿಡ್-19 ಪ್ರಕರಣ ಹೆಚ್ಚಳ ಸಾಧ್ಯತೆ: ಸಚಿವ ಸುಧಾಕರ್ ಎಚ್ಚರಿಕೆ

ಕೋವಿಡ್-19 ಪ್ರಕರಣಗಳು ಮೊದಲು ಜನಸಂಚಾರ ಹೆಚ್ಚಾಗಿ ಇರುವ ನಗರ ಪ್ರದೇಶಗಳಲ್ಲಿ ಹೆಚ್ಚಾಗಲಿದ್ದು ನಂತರ ಗ್ರಾಮೀಣ ಭಾಗಗಳಲ್ಲಿ, ಇತರ ಜಿಲ್ಲೆಗಳಲ್ಲಿ ಹರಡುವಿಕೆ ಹೆಚ್ಚಳವಾಗಲಿದೆ ಎಂದು ಆರೋಗ್ಯ ಹಾಗೂ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

Published: 13th May 2021 04:05 AM  |   Last Updated: 13th May 2021 12:53 PM   |  A+A-


Sudhakar

ಸುಧಾಕರ್

Posted By : Srinivas Rao BV
Source : The New Indian Express

ಬೆಂಗಳೂರು: ಕೋವಿಡ್-19 ಪ್ರಕರಣಗಳು ಮೊದಲು ಜನಸಂಚಾರ ಹೆಚ್ಚಾಗಿ ಇರುವ ನಗರ ಪ್ರದೇಶಗಳಲ್ಲಿ ಹೆಚ್ಚಾಗಲಿದ್ದು ನಂತರ ಗ್ರಾಮೀಣ ಭಾಗಗಳಲ್ಲಿ, ಇತರ ಜಿಲ್ಲೆಗಳಲ್ಲಿ ಹರಡುವಿಕೆ ಹೆಚ್ಚಳವಾಗಲಿದೆ ಎಂದು ಆರೋಗ್ಯ ಹಾಗೂ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

ಕೆಆರ್ ಪುರಂ, ಹೊಸಕೋಟೆ, ಚಿಕ್ಕಬಳ್ಳಾಪುರಗಳಲ್ಲಿ ತಾಲೂಕು ಆಸ್ಪತ್ರೆಗಳ ತಪಾಸಣೆ ವೇಳೆ ಸಚಿವರು ಈ ಎಚ್ಚರಿಕೆ ನೀಡಿದ್ದಾರೆ. 

ಇನ್ನು 2-3 ವಾರಗಳಲ್ಲಿ ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕು ಪ್ರಕರಣಗಳು ನಿಯಂತ್ರಣಕ್ಕೆ ಬರಲಿದೆ ಆದರೆ ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗಗಳಲ್ಲಿ ಪ್ರಕರಣಗಳು ಹೆಚ್ಚಾಗಿ ವರದಿಯಾಗಲಿವೆ ಎಂದು ಸುಧಾಕರ್ ಹೇಳಿದ್ದು, ಜಿಲ್ಲಾ ಅಧಿಕಾರಿಗಳೊಂದಿಗೆ ಈ ಸಂಬಂಧ ಚರ್ಚೆ ನಡೆಸಿ ಏರಿಕೆಯಾಗುವ ಪ್ರಕರಣಗಳನ್ನು ನಿಭಾಯಿಸುವುದಕ್ಕಾಗಿ ಈಗಿರುವ ಮೂಲಸೌಕರ್ಯಗಳನ್ನೇ ಸಜ್ಜುಗೊಳಿಸಿಕೊಳ್ಳಬೇಕೆಂದು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. 

ಬೆಂಗಳೂರು ನಗರದ ಹೊರಭಾಗಗಳಲ್ಲಿಯೂ ಕೋವಿಡ್-19 ಕೇರ್ ಕೇಂದ್ರಗಳನ್ನು, ಆಸ್ಪತ್ರೆಗಳನ್ನು ಸ್ಥಾಪಿಸಬೇಕೆಂದು ಸಚಿವರು ಸೂಚನೆ ನೀಡಿದ್ದಾರೆ. ಕಳೆದ ಆರೇಳು ತಿಂಗಳಲ್ಲಿ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಹಾಸಿಗೆ, ಆರು ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.


Stay up to date on all the latest ರಾಜ್ಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp