ಮೊದಲೇ ಬುಕ್ ಮಾಡಲ್ಪಟ್ಟ ಕೋವಿಡ್ ಲಸಿಕೆಗಳನ್ನು ತರಿಸಿಕೊಳ್ಳುವತ್ತ ಗಮನ ಹರಿಸಿ: ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಆದೇಶ

ಕೊರೋನಾ ಎರಡನೇ ಅಲೆ ದೇಶದ ಜನತೆಯನ್ನು ಭಾರೀ ಕಂಗೆಡಿಸಿದೆ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರತಿದಿನ ಸಂಪುಟ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಮತ್ತು ಆಡಳಿತಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ.
ಸಚಿವರು, ಅಧಿಕಾರಿಗಳೊಂದಿಗೆ ಸಭೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
ಸಚಿವರು, ಅಧಿಕಾರಿಗಳೊಂದಿಗೆ ಸಭೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಕೊರೋನಾ ಎರಡನೇ ಅಲೆ ದೇಶದ ಜನತೆಯನ್ನು ಭಾರೀ ಕಂಗೆಡಿಸಿದೆ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರತಿದಿನ ಸಂಪುಟ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಮತ್ತು ಆಡಳಿತಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ.

ನಿನ್ನೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಕ್ಕೆ ಪೂರ್ವವೇ ಆರ್ಡರ್ ಕೊಟ್ಟಿದ್ದ ಲಸಿಕೆಗಳ ಬಗ್ಗೆ ನೋಡಿಕೊಳ್ಳುವಂತೆ ಸೂಚಿಸಿದ್ದಾರೆ. ಲಸಿಕೆಗಳಿಗೆ ಜಾಗತಿಕ ಟೆಂಡರ್ ಕರೆಯುವ ಯೋಚನೆಯನ್ನು ಉಪ ಮುಖ್ಯಮಂತ್ರಿ ಅಶ್ವತ್ ನಾರಾಯಣ ಅವರು ಹೇಳಿರುವ ಸಂದರ್ಭದಲ್ಲಿ ಉತ್ಪಾದಕರಿಂದ ಮೊದಲೇ ಬುಕ್ಕಿಂಗ್ ಮಾಡಿರುವ ಲಸಿಕೆಗಳನ್ನು ತರಿಸುವ ಬಗ್ಗೆ ಅಧಿಕಾರಿಗಳು ನೋಡಿಕೊಳ್ಳುವಂತೆ ಮುಖ್ಯಮಂತ್ರಿಗಳು ಹೇಳಿದರು.

ಸದ್ಯಕ್ಕೆ ರಾಜ್ಯ ಸರ್ಕಾರ ಮುಂದಿರುವುದು 1 ಕೋಟಿ ಕೋವಿಶೀಲ್ಡ್ ಲಸಿಕೆ ತರಿಸುವುದು. ಇದನ್ನು ಸರ್ಕಾರ 18ರಿಂದ 44 ವರ್ಷದೊಳಗಿನವರಿಗೆ ನೀಡಲು ಆದೇಶ ಕೊಟ್ಟಿತ್ತು. ಇಲ್ಲಿಯವರೆಗೆ ಕರ್ನಾಟಕಕ್ಕೆ ಸಿಕ್ಕಿದ್ದು ಕೇವಲ 4 ಲಕ್ಷ ಡೋಸ್ ಗಳು ಮಾತ್ರ. ಅದು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ನಿಂದ.

ಸಭೆಯ ನಂತರ ಮಾಹಿತಿ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ನನ್ನ ಸಂಪುಟ ಸಹೋದ್ಯೋಗಿಗಳು ಮತ್ತು ಹಿರಿಯ ಅಧಿಕಾರಿಗಳು ಕೊರೋನಾ ಸಾಂಕ್ರಾಮಿಕ ತಡೆಗೆ ಸಾಕಷ್ಟು ಶ್ರಮವಹಿಸುತ್ತಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಆಕ್ಸಿಜನ್ ಪೂರೈಕೆ ಸಕಾಲಕ್ಕೆ ದಕ್ಷತೆಯಿಂದ ಸಿಗಲು, ಐಸಿಯು ಬೆಡ್ ಗಳು ಮತ್ತು ಲಸಿಕೆಗಳ ಸಂಗ್ರಹಕ್ಕೆ ಆದ್ಯತೆ ನೀಡಲು ಸೂಚಿಸಿದ್ದೇನೆ ಎಂದರು.

ಲಸಿಕೆ ಸಮಸ್ಯೆ ಶೀಘ್ರ ಬಗೆಹರಿಸುತ್ತೇವೆ: ರಾಜ್ಯದಲ್ಲಿ ಲಸಿಕೆ ಕೊರತೆ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸುವುದಾಗಿ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ. 45 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರದಿಂದ ಯಾವುದೇ ಅಡೆತಡೆಯಿಲ್ಲದೆ ಲಸಿಕೆ ಬರುತ್ತದೆ. 18ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವುದು ಪೂರೈಕೆ ಕೊರತೆಯಿಂದ ಆದ ಸಮಸ್ಯೆಯಾಗಿದೆ. ಹೀಗಾಗಿ ಇನ್ನು ಕೆಲವು ದಿನಗಳ ಕಾಲ 45 ವರ್ಷಕ್ಕೆ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡುವ ಬಗ್ಗೆ ಮಾತ್ರ ಗಮನ ಹರಿಸುತ್ತೇವೆ ಎಂದು ಹೇಳಿದ್ದಾರೆ.

ಲಸಿಕೆ ಪೂರೈಕೆಗೆ ಜಾಗತಿಕ ಟೆಂಡರ್ ಕರೆಯುವುದು ಪರಿಗಣನೆ ಹಂತದಲ್ಲಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com