ರಾಜ್ಯದಲ್ಲಿ ಇಂದು ಕೊರೋನಾಗೆ 373 ಬಲಿ, ಬೆಂಗಳೂರಿನಲ್ಲಿ 14,316 ಸೇರಿ 41,779 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಭೀಕರತೆ ಸೃಷ್ಟಿಸುತ್ತಿದೆ. ಒಂದೇ ದಿನ ಬರೋಬ್ಬರಿ 41,779 ಮಂದಿಗೆ ಕೊರೋನಾ ವಕ್ಕರಿಸಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 21,30,267ಕ್ಕೆ ಏರಿಕೆಯಾಗಿದೆ.

Published: 14th May 2021 07:31 PM  |   Last Updated: 14th May 2021 08:43 PM   |  A+A-


coronavirus

ಕೊರೋನಾ

Posted By : Vishwanath S
Source : Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಭೀಕರತೆ ಸೃಷ್ಟಿಸುತ್ತಿದೆ. ಒಂದೇ ದಿನ ಬರೋಬ್ಬರಿ 41,779 ಮಂದಿಗೆ ಕೊರೋನಾ ವಕ್ಕರಿಸಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 21,30,267ಕ್ಕೆ ಏರಿಕೆಯಾಗಿದೆ. 

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 373 ಮಂದಿ ಕೊರೋನಾಗೆ ಬಲಿಯಾಗಿದ್ದು ಸಾವಿನ ಸಂಖ್ಯೆ 21,085ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 14,316 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 10,29,312ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 121 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು  35,879 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 15,10,557ಕ್ಕೆ ಏರಿಕೆಯಾಗಿದೆ. ಇನ್ನು 5,98,605 ಸಕ್ರೀಯ ಪ್ರಕರಣಗಳಿವೆ.


Stay up to date on all the latest ರಾಜ್ಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp