ಸಿಎಂ ಬಿಎಸ್‌ವೈ ಮಾಜಿ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಕೊರೋನಾಗೆ ಬಲಿ

ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಾಜಿ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರು ಕೊರೋನಾಗೆ ಬಲಿಯಾಗಿದ್ದಾರೆ.

Published: 14th May 2021 06:57 PM  |   Last Updated: 14th May 2021 08:42 PM   |  A+A-


mahadev prakash

ಮಹದೇವ ಪ್ರಕಾಶ್

Posted By : Vishwanath S
Source : Online Desk

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಾಜಿ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರು ಕೊರೋನಾಗೆ ಬಲಿಯಾಗಿದ್ದಾರೆ. 

65 ವರ್ಷದ ಮಹದೇವ ಪ್ರಕಾಶ್ ಅವರು ಕಳೆದ 10 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

ಮಹದೇವ ಪ್ರಕಾಶ್ ಅವರು 1975ರ ಅಕ್ಟೋಬರ್ 15ರಂದು ಲೋಕವಾಣಿ ದಿನ ಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿಟ್ಟಿದ್ದರು. ನಂತರ ರಾಜಕೀಯ ವಿಶ್ಲೇಕರಾಗಿ ಮತ್ತು ಅಂಕಣಕಾರರಾಗಿ ಸೇವೆ ಸಲ್ಲಿಸಿದ್ದ ಅವರು ಬಿಎಸ್ ಯಡಿಯೂರಪ್ಪನವರಿಗೆ ಕೆಲ ತಿಂಗಳುಗಳ ಕಾಲ ಮಾಧ್ಯಮ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸಿ ರಾಜೀನಾಮೆ ನೀಡಿದ್ದರು.


Stay up to date on all the latest ರಾಜ್ಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp