ನಗರದಲ್ಲಿ ಕೊರೋನಾ ಹೆಚ್ಚಳ: ಚಿಕಿತ್ಸೆ ನಿರ್ವಹಣೆಗೆ ಬಿಬಿಎಂಪಿಯೊಂದಿಗೆ ಶೀಘ್ರದಲ್ಲೇ ಮುಂಬೈ ವೈದ್ಯರ ಸಾಥ್!

ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ನಡುವಲ್ಲೇ ಚಿಕಿತ್ಸಾ ಕೇಂದ್ರ ಹಾಗೂ ಕೋವಿಡ್ ಕೇರ್ ಕೇಂದ್ರಗಳಲ್ಲಿ ವೈದ್ಯಕೀಯ ಸಿಬ್ಬಂದಿಗಳ ಕೊರತೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ಇದೀಗ ಬಿಬಿಎಂಪಿಯೊಂದಿಗೆ ಮುಂಬೈ ವೈದ್ಯರು ಕೈಜೋಡಿಸಲಿದ್ದಾರೆಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ನಡುವಲ್ಲೇ ಚಿಕಿತ್ಸಾ ಕೇಂದ್ರ ಹಾಗೂ ಕೋವಿಡ್ ಕೇರ್ ಕೇಂದ್ರಗಳಲ್ಲಿ ವೈದ್ಯಕೀಯ ಸಿಬ್ಬಂದಿಗಳ ಕೊರತೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ಇದೀಗ ಬಿಬಿಎಂಪಿಯೊಂದಿಗೆ ಮುಂಬೈ ವೈದ್ಯರು ಕೈಜೋಡಿಸಲಿದ್ದಾರೆಂದು ತಿಳಿದುಬಂದಿದೆ. 

ಈಗಾಗಲೇ ಬಿಬಿಎಂಪಿ ಮುಂಬೈ ನಗರದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, 50 ಮಂದಿ ವೈದ್ಯರನ್ನು ರವಾನಿಸಿ ನೆರವಿನ ಹಸ್ತ ಚಾಚುವುದಾಗಿ ತಿಳಿಸಿದ್ದಾರೆಂದು ತಿಳಿದುಬಂದಿದೆ. 

ಈ ವೈದ್ಯರು ನಮ್ಮ ಕೆಲಸದ ಒತ್ತಡವನ್ನಷ್ಟೇ ಕಡಿಮೆ ಮಾಡುವುದಿಲ್ಲ. ಹೊಸದಾಗಿ ನೇಮಕಗೊಂಡಿರುವ ಸಿಬ್ಬಂದಿಗಳಿಗೂ ಚಿಕಿತ್ಸಾ ಕೇಂದ್ರಗಳಲ್ಲಿ ತರಬೇತಿ ನೀಡಲು ಸಹಾಯ ಮಾಡಲಿದ್ದಾರೆಂದು ವರದಿಗಳು ತಿಳಿಸಿವೆ. 

ಗುರುವಾರ ಕೋವಿಡ್ ಕೇರ್ ಕೇಂದ್ರ ಹಾಗೂ ಚಿಕಿತ್ಸಾ ಕೇಂದ್ರಗಳಲ್ಲಿ ಸಿಬ್ಬಂದಿಗಳ ಕೊರತೆ ಎದುರಾಗಿದ್ದ ಹಿನ್ನೆಲೆಯಲ್ಲಿ ಹಲವಾರು ಜನರಿಗೆ ವೈದ್ಯಕೀಯ ಚಿಕಿತ್ಸೆಗಳು ಸಿಗದೆ ಸಮಸ್ಯೆಗಳು ಎದುರಾಗಿತ್ತು. 

ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಮಹಿಳೆಯೊಬ್ಬರಿಗೆ ಮಹದೇವಪುರ ವಲಯದಲ್ಲಿರುವ ನವ್ಯಶ್ರೀ ಇಂಟರ್ ನ್ಯಾಷನಲ್ ಹೋಟೆಲ್ ಸಿಬ್ಬಂದಿಗಳು ಹಿಂದಕ್ಕೆ ಕಳುಹಿಸಿದ್ದಾರೆ. ಮೊದಲು ಅಪಾಯಿಂಟ್ಮೆಂಟ್ ತೆಗೆದುಕೊಳ್ಳಬೇಕು. ನಂತರ ನಿಗದಿತ ಸಮಯಕ್ಕೆ ಬರುವಂತೆ ಸೂಚಿಸಿದ್ದಾರೆ. ಆದರೆ, ಮಹಿಳೆಯೆ ಆಕ್ಸಿಜನ್ ಪ್ರಮಾಣ ತೀವ್ರವಾಗಿ ಕುಸಿಯುತ್ತಿದ್ದ ಹಿನ್ನೆಲೆಯಲ್ಲಿ ತುರ್ತಾಗಿ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿತ್ತು. ಬಳಿಕ ವೈಟ್'ಫೀಲ್ಡ್ ರೈಸಿಂಗ್ ಸದಸ್ಯರು ಸ್ಥಳವನ್ನು ಸುತ್ತುವರೆದೂ ವೈದ್ಯಕೀಯ ಚಿಕಿತ್ಸೆಗೆ ಆಗ್ರಹಿಸಿದರು. ಕೊರನೆ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ವರದಿಗಳು ತಿಳಿಸಿವೆ. 

ಇದೇ ರೀತಿಯ ಮತ್ತೊಂದು ಘಟನೆ ಹೆಚ್ಎಎಲ್ ನಲ್ಲೂ ನಡೆದಿದೆ. ವೈದ್ಯಕೀಯ ಸೌಲಭ್ಯ, ಸಿಬ್ಬಂದಿಗಳ ಕೊರತೆಗಳಿದ್ದ ಹಿನ್ನೆಲೆಯಲ್ಲಿ ಅಪಾಯಿಂಟ್ಮೆಂಟ್ ತೆಗೆದುಕೊಳ್ಳಬೇಕೆಂದು ಹೇಳಿ ಸೋಂಕಿತ ವ್ಯಕ್ತಿಯನ್ನು ಹಿಂದಕ್ಕೆ ಕಳುಹಿಸಲಾಗಿದೆ. 

ಈ ಬೆಳವಣಿಗೆಗಳ ಬಳಿಕ ಸ್ಪಷ್ಟನೆ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು, ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಲು ಯಾವುದೇ ರೀತಿಯ ಅಪಾಯಿಟ್ಮೆಂಟ್ ತೆಗೆದುಕೊಳ್ಳುವ ಅಗತ್ಯವಿಲ್ಲ. ಇಂತಹ ಘಟನೆಗಳು ಮರುಕಳಿಸದಂತೆ ಪ್ರತೀ ಚಿಕಿತ್ಸಾ ಕೇಂದ್ರಗಳಲ್ಲೂ ಮಾರ್ಷಲ್ ಗಳನ್ನು ನಿಯೋಜಿಸಲಾಗುತ್ತದೆ. ಪ್ರತೀ ಕೇಂದ್ರದಲ್ಲಿಯೂ ವೈದ್ಯರು ಇರಲಿದ್ದಾರೆ. ಇದೀಗ ಮತ್ತಷ್ಟು ವೈದ್ಯರನ್ನು ನಿಯೋಜಿಸಲಾಗುತ್ತದೆ. ನಿವೃತ್ತ ವೈದ್ಯರು, ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೂ ಜವಾಬ್ದಾರಿ ನೀಡಲಾಗುತ್ತದೆ. ಹೆಚ್ಚುವರಿಯಾಗಿ ವೈದ್ಯರು ಬರಲಿದ್ದಾರೆ. ವಾರ್ಡ್ ಮಟ್ಟದ ಕೋವಿಡ್ ಕೇರ್ ಕೇಂದ್ರ ಹಾಗೂ ಚಿಕಿತ್ಸಾ ಕೇಂದ್ರಗಳನ್ನೂ ಆರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com