ಪಿಎಂ ಕಿಸಾನ್ ಯೋಜನೆ: ರಾಜ್ಯದ 55 ಲಕ್ಷ ರೈತರಿಗೆ 985 ಕೋಟಿ ರೂ. ಬಿಡುಗಡೆ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 8ನೇ ಕಂತಿನ ಹಣಕಾಸಿನ ನೆರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಬಿಡುಗಡೆ ಮಾಡಿದ್ದು, ರಾಜ್ಯದ ಸುಮಾರು 55 ಲಕ್ಷ ರೈತರ ಖಾತೆಗೆ ರೂ.985.61 ಕೋಟಿ ವರ್ಗಾವಣೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 8ನೇ ಕಂತಿನ ಹಣಕಾಸಿನ ನೆರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಬಿಡುಗಡೆ ಮಾಡಿದ್ದು, ರಾಜ್ಯದ ಸುಮಾರು 55 ಲಕ್ಷ ರೈತರ ಖಾತೆಗೆ ರೂ.985.61 ಕೋಟಿ ವರ್ಗಾವಣೆಯಾಗಿದೆ. 

ಶುಕ್ರವಾರ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ವರ್ಚುವಲ್ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಿದ್ದರು. 

ಈ ವೇಳೆ ಪಿಎಂ ಕಿಸಾನ್ ಯೋಜನೆಯಡಿ ಇರುವ ಅನುಕೂಲತೆಗಳ ಬಗ್ಗೆ ಮತ್ತು ರಾಜ್ಯಕ್ಕೆ ಬಿಡುಗಡೆಯಾಗಿರುವ ಮೊತ್ತದ ಬಗ್ಗೆ ಪ್ರಧಾನಿ ಮಾಹಿತಿ ನೀಡಿದರು. 

ಈ ವೇಳೆ ಮಾತನಾಡಿದ ಯಡಿಯೂರಪ್ಪ ಅವರು, ಪ್ರಧಾನಿ ಮೋದಿಯವರು ಕೃಷಿ ಸಮ್ಮಾನ್ ಯೋಜನೆಯಡಿ ಏಪ್ರಿಲ್ ನಿಂದ ಜುಲೈ ವರೆಗಿನ ಸೌಲಭ್ಯವನ್ನು ಬಿಡುಗಡೆ ಮಾಡಿದ್ದಾರೆ. ಯೋಜನೆಯಡಿ ರಾಜ್ಯದ 55 ಲಕ್ಷ ಮಂದಿ ರೈತರ ಖಾತೆಗಳಿಗೆ ಪ್ರಸಕ್ತ ವರ್ಷದ ಮೊದಲ ಕಂತು ರೂ.986.61 ಕೋಟಿ ವರ್ಗಾವಣೆಯಾಗಿದೆ ಎಂದು ಹೇಳಿದರು. 

ಯೋಜನೆ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 2 ಕಂತುಗಳಲ್ಲಿ ಫಲಾನುಭವಿ ರೈತರಿಗೆ ವಾರ್ಷಿಕ ರೂ.4000 ಸಹಾಯಧನ ನೀಡುತ್ತಿದೆ. ಈವರೆಗೂ ರಾಜ್ಯದ ರೈತರಿಗೆ ಕೇಂದ್ರ ಸರ್ಕಾರ ಒಟ್ಟು ರೂ.6,936,98 ಕೋಟಿ ಮತ್ತು ರಾಜ್ಯ ಸರ್ಕಾರ ರೂ.2,891,70 ಕೋಟಿ ಪಾವತಿಸಿದೆ. ಯೋಜನೆಯ ಫಲಾನುಭವಿಗಳಾಗಿರುವ ರೈತ ಕುಟುಂಬಗಳ ಅರ್ಹತೆಯನ್ನು ಪರಿಶೀಲಿಸಲಾಗುತ್ತದೆ ಎಂದು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com