ಬೆಂಗಳೂರು: ವಿಮಾನ ನಿಲ್ದಾಣಕ್ಕೆ ತೆರಳುವ ಬಸ್'ಗಳ ಸಂಖ್ಯೆ ಇಳಿಸಿದ ಬಿಎಂಟಿಸಿ

ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನಕ್ಕೆ ತೆರಳುವ ಬಸ್ ಗಳ ಸಂಖ್ಯೆಯನ್ನು ಬಿಎಂಟಿಸಿ ಇಳಿಕೆ ಮಾಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನಕ್ಕೆ ತೆರಳುವ ಬಸ್ ಗಳ ಸಂಖ್ಯೆಯನ್ನು ಬಿಎಂಟಿಸಿ ಇಳಿಕೆ ಮಾಡಿದೆ. 

ಕೊರೋನಾ ಲಾಕ್ಡೌನ್ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಬಾರದು ಎಂಬ ಉದ್ದೇಶದಿಂದ ಬಿಎಂಪಿಟಿ 6 ವಾಯುವಜ್ರ ಬಸ್ ಗಳನ್ನು ಸೇವೆ ನಿಯೋಜಿಸಿತ್ತು. ಆದರೆ, ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ 4 ಬಸ್ ಗಳು ಮಾತ್ರ ಕಾರ್ಯನಿರ್ವಹಿಸಲಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ನಗರದಲ್ಲಿ 6 ವಾಯು ವಜ್ರ ಬಸ್ ಗಳನ್ನು ಬಿಡಲಾಗಿತ್ತು. ಈ ಬಸ್ ಗಳು 22 ಟ್ರಿಪ್ ಒದಗಿಸುತ್ತಿದ್ದವು. ಇದೀಗ ಈ ಸಂಖ್ಯೆಯನ್ನು 4ಕ್ಕೆ ಇಳಿಸಲಾಗಿದೆ. ಈ ಬಸ್ ಗಳು 15 ಟ್ರಿಪ್ ಗಳನ್ನು ಒದಗಿಸಲಿವೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯವಾದ ಹಿನ್ನೆಲೆಯಲ್ಲಿ ಪ್ರತೀ ಟ್ರಿಪ್ ನಲ್ಲಿಯೂ ಕೇವಲ 22 ಮಂದಿ ಪ್ರಯಾಣಿಕರಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಆದರೆ, ಪ್ರತೀ ಟ್ರಿಪ್ ನಲ್ಲಿಯೂ ಕೇವಲ 5-6 ಮಂದಿ ಪ್ರಯಾಣಿಕರು ಮಾತ್ರ ಪ್ರಯಾಣಿಸುತ್ತಿದ್ದಾರೆಂದು ಬಿಎಂಟಿಸಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಕೊರೋನಾ ಭೀತಿಯಿಂದಾಗಿ ವಿಮಾನ ಪ್ರಯಾಣಿಕರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಈ ಬೆಳವಣಿಗೆ ಇದೇ ರೀತಿ ಮುಂದುವರೆದಿದ್ದೇ ಆದರೆ, ಬಸ್ ಗಳ ಸಂಖ್ಯೆ ಮತ್ತಷ್ಟು ಕಡಿಮೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com