ಬೆಂಗಳೂರು: 18 ರಿಂದ 44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ ಸ್ಥಗಿತ

ಕೋವಿಡ್ ಲಸಿಕೆಯಲ್ಲಿ ಕೊರತೆ ಎದುರಾದ ಹಿನ್ನೆಲೆಯಲ್ಲಿ ನಗರದ ಕೆಸಿ ಜನರಲ್ ಆಸ್ಪತ್ರೆಯಲ್ಲಿ 18-44 ವರ್ಷ ವಯೋಮಿತಿಯ ನಾಗರೀಕರಿಗೆ ಕೋವಿಡ್ ಲಸಿಕೆ ನೀಡಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಆಸ್ಪತ್ರೆಯಿಂದ ಹಾಕಲಾಗಿರುವ ಫಲಕ
ಆಸ್ಪತ್ರೆಯಿಂದ ಹಾಕಲಾಗಿರುವ ಫಲಕ

ಬೆಂಗಳೂರು: ಕೋವಿಡ್ ಲಸಿಕೆಯಲ್ಲಿ ಕೊರತೆ ಎದುರಾದ ಹಿನ್ನೆಲೆಯಲ್ಲಿ ನಗರದ ಕೆಸಿ ಜನರಲ್ ಆಸ್ಪತ್ರೆಯಲ್ಲಿ 18-44 ವರ್ಷ ವಯೋಮಿತಿಯ ನಾಗರೀಕರಿಗೆ ಕೋವಿಡ್ ಲಸಿಕೆ ನೀಡಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. 

ಈ ಕುರಿತು ಆಸ್ಪತ್ರೆಯ ಸಿಬ್ಬಂದಿಗಳು ಪ್ರತಿಕ್ರಿಯೆ ನೀಡಿದ್ದು, ಲಸಿಕೆಗಳ ಕೊರತೆ ಎದುರಾದ ಹಿನ್ನೆಲೆಯಲ್ಲಿ ಲಸಿಕೆ ಅಭಿಯಾನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋವ್ಯಾಕ್ಸಿನ್ ಲಸಿಕೆಗಳು ಶೀಘ್ರದಲ್ಲೇ ಬರಲಿದ್ದು, ಲಸಿಕೆಗಳು ಆಸ್ಪತ್ರೆಗೆ ತಲುಪಿದ ಕೂಡಲೇ ಮತ್ತೆ ಲಸಿಕೆ ಅಭಿಯಾನ ಆರಂಭಿಸಲಾಗುತ್ತದೆ. ಜನರು ಆತಂಕಕ್ಕೊಳಗಾಗಬಾರದು ಎಂದು ಹೇಳಿದ್ದಾರೆ. 

ಈ ನಡುವೆ ಮಹಾರಾಷ್ಟ್ರ ಸರ್ಕಾರ ಕೂಡ ಕೋವಿಡ್ ಲಸಿಕೆಯ ಕೊರತೆ ಹಿನ್ನೆಲೆಯಲ್ಲಿ 18–44 ವರ್ಷ ವಯೋಮಿತಿಯ ನಾಗರಿಕರಿಗೆ ಕೋವಿಡ್ ಲಸಿಕೆ ನೀಡಿಕೆಯನ್ನು ಸ್ಥಗಿತ ಮಾಡಿತ್ತು. ಅಲ್ಲಿಯೂ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆದ್ಯತೆ ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com