ಕೋವಿಡ್-19: 26 ಪ್ರದೇಶಗಳಲ್ಲಿ ಚಿಕಿತ್ಸಾ ಕೇಂದ್ರ ತೆರೆದ ಬಿಬಿಎಂಪಿ

ಪಾಲಿಕೆ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಪಾಲಿಕೆ ಎಲ್ಲಾ ವಾರ್ಡ್ ಗಳಲ್ಲಿ ಚಿಕಿತ್ಸಾ ಕೇಂದ್ರ ತೆರೆಯಲು ತೀರ್ಮಾನಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಪಾಲಿಕೆ ಎಲ್ಲಾ ವಾರ್ಡ್ ಗಳಲ್ಲಿ ಚಿಕಿತ್ಸಾ ಕೇಂದ್ರ ತೆರೆಯಲು ತೀರ್ಮಾನಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಎಲ್ಲಾ ವಾರ್ಡ್ ಗಳಲ್ಲಿ ಚಿಕಿತ್ಸಾ ಕೇಂದ್ರ ತೆರೆಯುವ ಗುರಿ ಹೊಂದಲಾಗಿದೆ. ಮೊದಲ ಹಂತದಲ್ಲಿ ಕೋವಿಡ್ ಆರೈಕೆ ಕೇಂದ್ರ ಹಾಗೂ ಹೆರಿಗೆ ಆಸ್ಪತ್ರೆ ಸೇರಿದಂತೆ 26 ಕಡೆ ಈ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಹೇಳಿದರು. 

ನಗರದಲ್ಲಿ ಸಾರ್ವಜನಿಕರು ಅಥವಾ ಕೊರೋನಾ ಸೋಂಕಿತರು ಪಾಲಿಕೆಗೆ ಕರೆ ಮಾಡದೆಯೂ ಪಾಲಿಕೆಯ ವೈದ್ಯಕೀಯ ತಪಾಸಣೆ ಕೇಂದ್ರಗಳಿಗೆ ನೇರವಾಗಿ ತೆರಳಲು ಅವಕಾಶ ಕಲ್ಪಿಸಲಾಗಿದೆ. ಅಲ್ಲಿನ ವೈದ್ಯರು ಕೊರೋನಾ ಸೋಂಕಿತರ ಆರೋಗ್ಯ ಸ್ಥಿತಿ ಅವಲೋಕಿಸಿ ಅಗತ್ಯ ಸಲಹೆ ನೀಡಲಿದ್ದಾರೆ. ಈ ಕೇಂದ್ರಗಳಲ್ಲಿ ಚಿಕಿತ್ಸೆಗೆ ಅಗತ್ಯವಾದ ಹಾಸಿಗೆಗಳು ಹಾಗೂ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗಿದೆ. ವೈದ್ಯರು ಹಾಗೂ ನರ್ಸ್ ಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು. 

ಚಿಕಿತ್ಸಾ ಕೇಂದ್ರದಲ್ಲಿ ವೈದ್ಯಕೀಯ ತಪಾಸಣೆಗಾಗಿ ಥರ್ಮಲ್, ಸ್ಕ್ಯಾನರ್, ಪಲ್ಸ್ ಆಕ್ಸಿಮೀಟರ್ ಹಾಗೂ ಅವಶ್ಯ ಔಷಧಿಗಳ ವ್ಯವಸ್ಥೆ ಮಾಡಲಾಗಿದೆ. ಈ ಕೇಂದ್ರಕ್ಕೆ ಬಂದರೆ ಆರೋಗ್ಯ ಸ್ಥಿತಿ ಅವಲೋಕಿಸಿ ಹೋಮ್ ಐಸೋಲೇಷನ್, ಕೋವಿಡ್ ಆರೈಕೆ ಕೇಂದ್ರ, ಸ್ಟೆಬಲೈಜೇಷನ್ ಸೆಂಟರ್ ಗಳಿಗೆ ಕಳುಹಿಸಲಾಗುತ್ತದೆ. ಆಸ್ಪತ್ರೆ ಅಗತ್ಯವಿರುವ ಸೋಂಕಿತರಿಗೆ ಆಸ್ಪತ್ರೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತದೆ. ಅಂತೆಯೇ ಪ್ರತಿ ಕೇಂದ್ರಕ್ಕೂ ನೋಡೆಲ್ ಅಧಿಕಾರಿ ನಿಯೋಜಿಸಲಾಗಿದ್ದು, ದಿನದ 24 ಗಂಟೆಗಳ ಕಾಲ ಈ ಕೇಂದ್ರಗಳು ಕಾರ್ಯನಿರ್ವಹಿಸಲಿವೆ ಎಂದು ಮಾಹಿತಿ ನೀಡಿದ್ದಾರೆ. 

ಪಾಲಿಕೆ ವಿಶೇಷ ಆಯುಕ್ತ ರಂದೀಪ್ ಮಾತನಾಡಿ, ಈ ಹಿಂದೆ ಸೋಂಕಿತರಿಗೆ ಬೆಡ್ ಬ್ಲಾಕ್ ಮಾಡುವಾಗ ವೈದ್ಯರ ತಂಡ ವಾರ್ ರೂಮ್'ನ ಸಹಾಯವಾಣಿ ಸಂಖಅಯೆ ಮೂಲಕ ಟೆಲಿ ಟ್ರಯಾಜ್ ಮಾಡಿ ಆರೋಗ್ಯ ಸ್ಥಿತಿ ಅವಲೋಕಿಸುತ್ತಿದ್ದರು. ಈಗ ಭೌತಿಕ ತಪಾಸಣೆ ಮಾಡಿ ಆರೋಗ್ಯದ ಸ್ಥಿತಿಗತಿ ಅವಲೋಕಿಸಲಾಗುತ್ತದೆ ಎಂದು ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com