ಕರಾವಳಿಯಾದ್ಯಂತ ಭಾರಿ ಮಳೆ, ರಕ್ಷಣೆಗೆ ಧಾವಿಸಿದ ಎನ್'ಡಿಆರ್'ಎಫ್ ತಂಡ

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಕರಾವಳಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಕರಾವಳಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ.

ಮಳೆ, ಪ್ರವಾಹ ಸಂಬಂಧಿತ ಅನಾಹುತ ತಡೆಗೆ ಜಿಲ್ಲೆಗೆ ಎನ್ ಡಿಆರ್ ಎಫ್ ತಂಡ ಆಗಮಿಸಿದೆ. ಜಿಲ್ಲೆಯ ಕೆಲವೆಡೆ ಶುಕ್ರವಾರ ರಾತ್ರಿಯಿಂದಲೆ ಮಳೆ ಆರಂಭವಾಗಿದ್ದು ಶನಿವಾರವೂ ಮುಂದುವರೆದಿದೆ. ಮಳೆಯ ಜೊತೆಗೆ ಬಲವಾದ ಗಾಳಿಯಿಂದ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ.

ಚಂಡಮಾರುತದ ಪರಿಣಾಮ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಪ್ರದೇಶದಲ್ಲಿ ಇನ್ನೂ ಕೆಲ ದಿನಗಳಮಟ್ಟಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದೂ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com