ಖನಿಜ ಅಭಿವೃದ್ಧಿ ನಿಧಿಯಿಂದ ರಾಜ್ಯಕ್ಕೆ ಆಕ್ಸಿಜನ್ ಟ್ಯಾಂಕರ್ ಗಳ ಖರೀದಿ: ಸಚಿವ ಮುರುಗೇಶ್ ನಿರಾಣಿ

ಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್)ಯಿಂದ ರಾಜ್ಯಕ್ಕೆ ಆಕ್ಸಿಜನ್ ಟ್ಯಾಂಕರ್'ಗಳು, ಆಕ್ಸಿಜನ್ ಸಾಂದ್ರಕಗಳು, ಆಕ್ಸಿಮೀಟರ್‌ಗಳು ಹಾಗೂ ಇತರೆ ತುರ್ತು ವೈದ್ಯಕೀಯ ಆಗತ್ಯಗಳನ್ನು ಖರೀದಿ ಮಡಾಲಾಗುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿಯವರು ಹೇಳಿದ್ದಾರೆ. 
ಸಚಿವ ಮುರುಗೇಶ್ ನಿರಾಣಿ
ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು: ಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್)ಯಿಂದ ರಾಜ್ಯಕ್ಕೆ ಆಕ್ಸಿಜನ್ ಟ್ಯಾಂಕರ್'ಗಳು, ಆಕ್ಸಿಜನ್ ಸಾಂದ್ರಕಗಳು, ಆಕ್ಸಿಮೀಟರ್‌ಗಳು ಹಾಗೂ ಇತರೆ ತುರ್ತು ವೈದ್ಯಕೀಯ ಆಗತ್ಯಗಳನ್ನು ಖರೀದಿ ಮಡಾಲಾಗುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿಯವರು ಹೇಳಿದ್ದಾರೆ. 

ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್ ನಿರಾಣಿಯವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಉಂಟಾದ ಬಿಕ್ಕಟ್ಟನ್ನು ನಿಭಾಯಿಸಲು ಜಿಲ್ಲಾ ಖನಿಜ ಪ್ರತಿಷ್ಠಾನ (ಡಿಎಂಎಫ್) ನಿಧಿಯಡಿ ಲಭ್ಯವಿರುವ ಹಣವನ್ನು ಬಳಸಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. 

10 ಜಿಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಅಳವಡಿಸಲಾಗುತ್ತದೆ. ಆರೋಗ್ಯ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ ಗಣಿ ಮತ್ತು ಭೂ ವಿಜ್ಞಾನ ವಿಭಾಗದ ಸಮಿತಿ ಆಸ್ಪತ್ರೆ ಗುರಿತಿಸಬೇಕು. ಇದಲ್ಲದೇ, ಗಣಿ ಇಲಾಖೆಯಿಂದ ಒಂದು ಸಾವಿರ ಆಮ್ಲಜನಕ ಸಾಂದ್ರಕಗಳನ್ನು ಸಂಗ್ರಹಿಸಿ, ಅವುಗಳನ್ನು ಎಲ್ಲಾ ಜಿಲ್ಲೆಗಳಿಗೆ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆಂದು ತಿಳಿದುಬಂದಿದೆ. 

ಹೆಚ್ಚಿನ ಸಂಖ್ಯೆಯಲ್ಲಿ ಆಕ್ಸಿಮೀಟರ್ ಗಳನ್ನು ಸಂಗ್ರಹಿಸಿ ಗ್ರಾಮ ಪಂಚಾಯಿತಿ ಆರೋಗ್ಯ ಸಮಿತಿಗಳಿಗೆ ನೀಡಬೇಕು. ಇದನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೀಡಿದರೆ, ಗ್ರಾಮಸ್ಥರಿಗೆ ಆಮ್ಮಜನಕದ ಶುದ್ಧತ್ವವನ್ನು ನಿಯಮಿತವಾಗಿ ಪರಿಶೀಲಿಸಬಹುದು ಎಂದು ಸಲಹೆ ನೀಡಿದ್ದಾರೆನ್ನಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com