ಕೋವಿಡ್-19: ರಾಜ್ಯದ ಸ್ಥಿತಿಗತಿ ಅರಿಯಲು ಕರ್ನಾಟಕದ 17 ಜಿಲ್ಲಾಧಿಕಾರಿಗಳ ಜೊತೆ ಮೇ.18 ರಂದು ಪ್ರಧಾನಿ ಮೋದಿ ಸಂವಾದ!

ಕೊರೋನಾ ವೈರಸ್ ಪ್ರಕರಣ ಹೆಚ್ಚುತ್ತಿರುವ ಕಾರಣ ಪರಿಸ್ಥಿತಿ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ ದೇಶದ ಹಲವು ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಇರುವ  ಪರಿಣಾಮ ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಪರಿಸ್ಥಿತಿ ಅರಿಯಲು ಸೋಂಕು ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಂವಾದ...
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ಬೆಂಗಳೂರು: ಕೊರೋನಾ ವೈರಸ್ ಪ್ರಕರಣ ಹೆಚ್ಚುತ್ತಿರುವ ಕಾರಣ ಪರಿಸ್ಥಿತಿ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ ದೇಶದ ಹಲವು ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಇರುವ  ಪರಿಣಾಮ ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಪರಿಸ್ಥಿತಿ ಅರಿಯಲು ಸೋಂಕು ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಂವಾದ ನಡೆಸಲಿದ್ದಾರೆಂದು ತಿಳಿದುಬಂದಿದೆ. 

ಮೇ.18 ರಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯದ 17 ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ. 

ಈ ವೇಳೆ ಪ್ರತಿ ಜಿಲ್ಲೆಗಳ ಕೋವಿಡ್ ಸ್ಥಿತಿ-ಗತಿ ಕುರಿತು ಮಾಹಿತಿ ಪಡೆದುಕೊಂಡು, ಬಳಿಕ ಸೂಕ್ತ ಸಲಹೆಗಳನ್ನು ನೀಡಲಿದ್ದಾರೆಂದು ತಿಳಿದುಬಂದಿದೆ. 

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ಹಾಸನ, ಬಳ್ಳಾರಿ, ಮೈಸೂರು, ತುಮಕೂರು, ಕೋಲಾರ, ಕೊಡಗು, ಉಡುಪಿ, ಶಿವಮೊಗ್ಗ, ಧಾರವಾಡ, ದಕ್ಷಿಣ ಕನ್ನಡ, ರಾಯಚೂರು, ಕಲಬುರಗಿ, ಮಂಡ್ಯ, ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿಗಳ ಜೊತೆ ಮೋದಿ ಸಂವಾದ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ. 

ಪ್ರಧಾನಿ ಮೋದಿಯವರು ವಿಡಿಯೋ ಸಂವಾದ ನಡೆಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್, ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ್ ಅವರು ಹಾಜರರಿಲಿದ್ದಾರೆಂದು ತಿಳಿದುಬಂದಿದೆ. 

ಈ ನಡುವೆ ಪ್ರಧಾನಿ ಮೋದಿಯವರು ವಿಡಿಯೋ ಸಂವಾದ ನಡೆಸುವ ಮುನ್ನಾದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಕೂಡ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದು, ಜಿಲ್ಲೆಗಳ ಪರಿಸ್ಥಿತಿ ಕುರಿತು ಮಾಹಿತಿ ಪಡೆಯಲಿದ್ದಾರೆಂದು ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com