ಕೋವಿಡ್‌ನಿಂದ ಮೃತಪಟ್ಟ ಕುಟುಂಬಕ್ಕೆ 50ಸಾವಿರ ರೂ.ಪರಿಹಾರ ಘೋಷಿಸಿದ ಸಚಿವ ಬಿ.ಸಿ.ಪಾಟೀಲ್

ಕೋವಿಡ್ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50ಸಾವಿರ ರೂ.ಪರಿಹಾರ ಧನ ನೀಡುವುದಾಗಿ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್  ಘೋಷಿಸಿದ್ದಾರೆ.
ಬಿ.ಸಿ ಪಾಟೀಲ್
ಬಿ.ಸಿ ಪಾಟೀಲ್

ಬೆಂಗಳೂರು: ಹಿರೇಕರೂರು ಮತಕ್ಷೇತ್ರದ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50ಸಾವಿರ ರೂ.ಪರಿಹಾರ ಧನ ನೀಡುವುದಾಗಿ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್  ಘೋಷಿಸಿದ್ದಾರೆ.

ಹಿರೇಕೆರೂರು ಮತಕ್ಷೇತ್ರದಲ್ಲಿ ಇಲ್ಲಿಯವರೆಗೆ ಸುಮಾರು ಹದಿನೆಂಟು ಮಂದಿ‌ ಸೋಂಕಿನಿಂದ ಮೃತಪಟ್ಟಿದ್ದು,ಮೃತಪಟ್ಟವರ ಕುಟುಂಬದ ಸದಸ್ಯರನ್ನು ನಾಳೆ ಬಿ.ಸಿ.ಪಾಟೀಲ್ ಭೇಟಿಯಾಗಿ ಪರಿಹಾರ ಧನ ವಿತರಿಸಲಿದ್ದಾರೆ.

ಈ ಕುರಿತಂತೆ ವಿಡಿಯೋ ಮಾಡಿ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಬಿ.ಸಿ.ಪಾಟೀಲ್ ಅವರು,  'ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನಲ್ಲಿ ಕೋವಿಡ್ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟ ಕುಟುಂಬದ ಸದಸ್ಯರಿಗೆ ವೈಯಕ್ತಿಕವಾಗಿ 50 ಸಾವಿರ ರೂ. ಧನ ಸಹಾಯ ಮಾಡಲು ನಿರ್ಧರಿಸಿದ್ದು, ನಾಳೆಯಿಂದ ಕ್ಷೇತ್ರದಲ್ಲಿ ಸಂಚರಿಸಿ ಈ ಕಾರ್ಯ ಕೈಗೊಳ್ಳಲಿದ್ದೇನೆ ಎಂದು  ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com