ಎಸ್ಎಸ್ಎಲ್'ಸಿ, ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ವದಂತಿ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳದ ಕಾರಣ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಪಡಿಸುವ ಬಗ್ಗೆ ಇನ್ನೂ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸಚಿವ ಸುರೇಶ್ ಕುಮಾರ್
ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳದ ಕಾರಣ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಪರೀಕ್ಷೆ ರರದ್ದು ಪಡಿಸುವ ಬಗ್ಗೆ ಇನ್ನೂ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಕೋವಿಡ್ ತೀವ್ರ ಪ್ರಸರಣದ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಎಸ್.ಎಸ್.ಎಲ್.ಸಿ-ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನಕ್ಕೆ ಬರಲಾಗಿಲ್ಲ .

ಕೆಲವು ಮಾಧ್ಯಮಗಳ ಸುದ್ದಿ ಊಹಾಪೋಹವಷ್ಟೇ ಎಂದಿರುವ ಸಚಿವರು ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿಕೊಂಡು ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕ ತೀರ್ಮಾನ ತೆಗೆದುಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ವಿಚಲಿತರಾಗದೇ ವಿದ್ಯಾರ್ಥಿಗಳು ಎಂದಿನ ಅಧ್ಯಯನದಲ್ಲಿ ತೊಡಗುವಂತೆ ಸಚಿವರು ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com