ಕೊಡಗಿನಲ್ಲಿ ಕಾಡಾನೆ ದಾಳಿಗೆ ತಮಿಳುನಾಡಿನ ಕಾರ್ಮಿಕ ಬಲಿ!

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ವಾಲ್ನೂರು ಗ್ರಾಮದಲ್ಲಿ ಕಾಡಾನೆ ದಾಳಿ ಮಾಡಿದ್ದು ಕಾರ್ಮಿಕನೋರ್ವ ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ವಾಲ್ನೂರು ಗ್ರಾಮದಲ್ಲಿ ಕಾಡಾನೆ ದಾಳಿ ಮಾಡಿದ್ದು ಕಾರ್ಮಿಕನೋರ್ವ ಮೃತಪಟ್ಟಿದ್ದಾರೆ. 

ತಮಿಳುನಾಡು ಮೂಲದ 50 ವರ್ಷದ ಏಳುಮಲೈ ಎಂಬುವರು ಪ್ರಭುಗಣಪತಿ ಅವರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಹೊಳೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆನೆ ದಾಳಿ ಮಾಡಿದೆ. 

ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಏಳುಮಲೈ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಕೊಡಗಿನಲ್ಲಿ ಕೆಲ ತಿಂಗಳುಗಳಿಂದ ಕಾಡಾನೆ ದಾಳಿಗಳು ನಡೆಯುತ್ತಿವೆ. ಇನ್ನು ಕಾಡಾನೆಗಳ ಹಿಂಡು ಗ್ರಾಮಗಳಿಗೆ ಲಗ್ಗೆ ಇಡುತ್ತಿರುವುದು ಗ್ರಾಮಸ್ಥರನ್ನು ಆತಂಕಕ್ಕೀಡುಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com