ಕೊರೋನಾ 3ನೇ ಅಲೆ ಭೀತಿ; ವೈದ್ಯಕೀಯ ಸಿಬ್ಬಂದಿ ಸಂಖ್ಯೆ ಹೆಚ್ಚಿಸಲು ಹೂಡಿಕೆ ಮಾಡಿ: ಸರ್ಕಾರಕ್ಕೆ ತಜ್ಞರು

ಕೊರೋನಾ 2ನೇ ಅಲೆ ನಡುವಲ್ಲೇ ಇದೀಗ ರಾಜ್ಯದಲ್ಲಿ 3ನೇ ಅಲೆ ಭೀತಿ ಶುರುವಾಗಿದ್ದು, ಪರಿಸ್ಥಿತಿ ಎದುರಿಸಲು ಸಿದ್ಧರಾಗುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ನಡುವಲ್ಲೇ ವೈದ್ಯಕೀಯ ಸಿಬ್ಬಂದಿಗಳ ಸಂಖ್ಯೆ ಹೆಚ್ಚಿಸಲು ಹೆಚ್ಚಿನ ಹೂಡಿಕೆ ಮಾಡುವಂತೆ ತಜ್ಞರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ 2ನೇ ಅಲೆ ನಡುವಲ್ಲೇ ಇದೀಗ ರಾಜ್ಯದಲ್ಲಿ 3ನೇ ಅಲೆ ಭೀತಿ ಶುರುವಾಗಿದ್ದು, ಪರಿಸ್ಥಿತಿ ಎದುರಿಸಲು ಸಿದ್ಧರಾಗುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ನಡುವಲ್ಲೇ ವೈದ್ಯಕೀಯ ಸಿಬ್ಬಂದಿಗಳ ಸಂಖ್ಯೆ ಹೆಚ್ಚಿಸಲು ಹೆಚ್ಚಿನ ಹೂಡಿಕೆ ಮಾಡುವಂತೆ ತಜ್ಞರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. 

3ನೇ ಅಲೆ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಬೇಕಾದರೆ ರಾಜ್ಯ ಸರ್ಕಾರ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಿಸಬೇಕಿದೆ ಎಂದು ತಜ್ಞರು ತಿಳಿಸಿದ್ದಾರೆ. ಅಲ್ಲದೆ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಅಗತ್ಯವಿರುವ ವೈದ್ಯರು, ನರ್ಸ್'ಗಳು, ಅರೆವೈದ್ಯಕೀಯ ಮತ್ತು ಇತರೆ ಆರೋಗ್ಯ ಸಿಬ್ಬಂದಿಗಳ ಸಂಖ್ಯೆ ಕುರಿತು ತಾಂತ್ರಿಕ ಸಮಿತಿಯು ಕೊರೋನಾ ಮೊದಲ ಅಲೆ ವೇಳೆ ಸಿದ್ಧಪಡಿಸಿದ್ದ ದಾಖಲೆಯನ್ನು ಪರಿಶೀಲಿಸಬೇಕೆಂದು ಹೇಳಿದ್ದಾರೆ. 

ಕೊರೋನಾ ಮೊದಲನೇ ಅಲೆ ವೇಳೆ ಬಿಎಂಆರ್‌ಸಿಎಲ್ ಮಾಜಿ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ನೇತೃತ್ವದ ಸಮಿತಿಯು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಅಗತ್ಯವಿರುವ ವೈದ್ಯಕೀಯ ಸಿಬ್ಬಂದಿಗಳ ಕುರಿತು ವರದಿಯೊಂದನ್ನು ಸಿದ್ಧಪಡಿಸಿತ್ತು. 

ರಾಜ್ಯದಲ್ಲಿ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿದ್ದಂತೆಯೇ ಸಮಿತಿಯು ವೈದ್ಯರು, ನರ್ಸ್ ಗಳು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗಳ ಅಗತ್ಯತೆಗಳ ಕುರಿತು ಲೆಕ್ಕ ಹಾಕಿದೆ. ಪ್ರತೀ 100 ಸಕ್ರಿಯ ಪ್ರಕರಣಗಳಿಗೆ ಒಬ್ಬ ವೈದ್ಯರು, ಹಾಗೂ 10 ಸೋಂಕಿತ ವ್ಯಕ್ತಿಗಳಿಗೆ ಒಬ್ಬ ನರ್ಸ್ ಅಗತ್ಯವಿದೆ. ಐಸಿಯುವಿನಲ್ಲಿ ಪ್ರತೀ ಇಬ್ಬರು ರೋಗಿಗಳನ್ನು ನೋಡಿಕೊಳ್ಳಲು ಒಬ್ಬರು ನರ್ಸ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರತೀ 6 ಮಂದಿ ಸೋಂಕಿತರಿಗೆ ಒಬ್ಬರು ವೈದ್ಯರು ಬೇಕಿದ್ದಾರೆ. ಆದರೆ, ವಾಸ್ತವಿಕವಾಗಿ ಐಸಿಯುವಿನಲ್ಲಿ 10-15 ಸೋಂಕಿತರಿಗೆ ಒಬ್ಬ ವೈದ್ಯ ಹಾಗೂ 20-30 ಸೋಂಕಿತರನ್ನು ಒಬ್ಬ ನರ್ಸ್ ನೋಡಿಕೊಳ್ಳುತ್ತಿದ್ದಾರೆಂದು ಸಮಿತಿಯ ಸದಸ್ಯರು ತಿಳಿಸಿದ್ದಾರೆ. 

 ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಂ ಅಸೋಸಿಯೇಷನ್‌ (ಫನಾ) ಅಧ್ಯಕ್ಷ ಡಾ.ಪ್ರಸನ್ನ ಹೆಚ್.ಎಂ ಅವರು ಮಾತನಾಡಿ, ಸರ್ಕಾರ ಆಸ್ಪತ್ರೆಗಳು ಮತ್ತು ಆರೋಗ್ಯ ರಕ್ಷಣೆ ಇರುವ ರಾಷ್ಟ್ರೀಯ ಮಾನ್ಯತಾ ಮಂಡಳಿ ಹೊರಡಿಸಿರುವ ಮಾರ್ಗಸೂಚಿಗಳನ್ನೂ ಸರ್ಕಾರ ಪಾಲನೆ ಮಾಡುತ್ತಿಲ್ಲ. ಕೇವಲ ವೆಂಟಿಲೇಟರ್ ಗಳು, ಐಸಿಯು, ಆಕ್ಸಿಜನ್ ಸಾಂದ್ರಕಗಳಿಗೆ ಬಂಡವಾಳ ಹೂಡುತ್ತಿದೆ. ಆದರೆ, ಈ ಯಂತ್ರಗಳನ್ನು ನೋಡಿಕೊಳ್ಳುವ ವೈದ್ಯಕೀಯ ಸಿಬ್ಬಂದಿಗಳಿಗೆ ಬಂಡವಾಳ ಹೂಡುತ್ತಿಲ್ಲ ಎಂದು ಹೇಳಿದ್ದಾರೆ.

ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾತನಾಡಿ, ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್‌ಜಿಯುಎಚ್‌ಎಸ್‌)ವನ್ನು ಕಾರ್ಯಪಡೆಗೆ ಸೇರ್ಪಡೆಗೊಳಿಸಲು ಮತ್ತು ಯಂತ್ರಗಳನ್ನು ನಿರ್ವಹಿಸುವಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡುವಂತೆ ಸೂಚಿಸಲು ಸರ್ಕಾರದ ಮುಂದೆ ಪ್ರಸ್ತಾಪ ಇಡಲಾಗಿದೆ. ಎಂಬಿಬಿಎಸ್ ಮತ್ತು ಇತರೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ವೆಂಟಿಲೇಟರ್‌ಗಳಂತಹ ಯಂತ್ರಗಳನ್ನು ನಿರ್ವಹಿಸುವ ಬಗ್ಗೆ ತರಬೇತಿ ನೀಡುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ, ಒಂದು ವೇಳೆ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದೇ ಆದರೆ, ಅವರನ್ನು ಕೂಡಲೇ ಕರ್ತವ್ಯಕ್ಕೆ ನಿಯೋಜಿಸಬಹುದು ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com