ಆಧಾರ್ ಕಾರ್ಡ್ ಇಲ್ಲದ ಹಿರಿಯ ನಾಗರಿಕರಿಗೂ ಕೋವಿಡ್ ಲಸಿಕೆ: ಶಶಿಕಲಾ ಜೊಲ್ಲೆ

ಆಧಾರ್ ಕಾರ್ಡ್ ಇಲ್ಲದೆ ಇರುವ ಹಿರಿಯ ನಾಗರಿಕರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಆರೋಗ್ಯ  ಸಚಿವರಿಗೆ ಮನವಿ ಮಾಡಲಾಗಿದ್ದು ಶ್ರೀಘ್ರವೇ ಲಸಿಕೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ  ತಿಳಿಸಿದ್ದಾರೆ.
ಸಚಿವರಾದ ಡಾ.ಕೆ. ಸುಧಾಕರ್, ಶಶಿಕಲಾ ಜೊಲ್ಲೆ
ಸಚಿವರಾದ ಡಾ.ಕೆ. ಸುಧಾಕರ್, ಶಶಿಕಲಾ ಜೊಲ್ಲೆ

ಬೆಂಗಳೂರು: ಆಧಾರ್ ಕಾರ್ಡ್ ಇಲ್ಲದೆ ಇರುವ ಹಿರಿಯ ನಾಗರಿಕರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಆರೋಗ್ಯ  ಸಚಿವರಿಗೆ ಮನವಿ ಮಾಡಲಾಗಿದ್ದು ಶ್ರೀಘ್ರವೇ ಲಸಿಕೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ  ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ಭೇಟಿ ಮಾಡಿದ ಶಶಿಕಲಾ ಜೊಲ್ಲೆ, ಸಮಗ್ರ ಮಕ್ಕಳ ರಕ್ಷಣಾ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ  ಸಿಬ್ಬಂದಿ ವರ್ಗದವರನ್ನು ಕೊರೋನಾ ಸೇನಾನಿಗಳೆಂದು ಭಾವಿಸಿ ಅವರಿಗೂ ಲಸಿಕೆ ನೀಡಬೇಕು. ಹೈಕೋರ್ಟ್ ಆದೇಶದಂತೆ ಹಿರಿಯ ನಾಗರಿಕರಿಗೆ ಹಾಗೂ ವಿಕಲ ಚೇತನರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು.

ಅಲ್ಲದೆ ಪ್ರಮುಖವಾಗಿ ಎಲ್ಲಾ ಜಿಲ್ಲಾ ಹಾಗೂ ತಾಲೂಕ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗಾಗಿ ಬೆಡ್ ಕಾಯ್ದಿರಿಸುವಂತೆ ಶಶಿಕಲಾ ಜೊಲ್ಲೆ ಮನವಿ ಮಾಡಿದ್ದಾರೆ.

ಮನವಿ ಸ್ವೀಕರಿಸಿದ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವೇ ಇವುಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com