ಚಾಮರಾಜನಗರ ದುರಂತ: ಸಂತ್ರಸ್ತರ ಕುಟುಂಬಸ್ಥರಿಗೆ ಪರಿಹಾರ ನೀಡಲು ಸಿಎಂ ಕ್ರಮ- ಸುರೇಶ್ ಕುಮಾರ್

ಚಾಮರಾಜನಗರ ದುರಂತದಲ್ಲಿ ಮೃತಪಟ್ಟ 24 ಮಂದಿ ಕೋವಿಡ್ ರೋಗಿಗಳ ಕುಟುಂಬಸ್ಥರಿಗೆ ಪರಿಹಾರ ನೀಡುವ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಸುರೇಶ್ ಕುಮಾರ್
ಸುರೇಶ್ ಕುಮಾರ್

ಮೈಸೂರು: ಚಾಮರಾಜನಗರ ದುರಂತದಲ್ಲಿ ಮೃತಪಟ್ಟ 24 ಮಂದಿ ಕೋವಿಡ್ ರೋಗಿಗಳ ಕುಟುಂಬಸ್ಥರಿಗೆ ಪರಿಹಾರ ನೀಡುವ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ದುರಂತದಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಹೈಕೋರ್ಟ್ ಸೂಚಿಸಿದ್ದು, ನ್ಯಾಯಾಲಯದ ಮುಂದಿನ ವಿಚಾರಣೆ ದಿನಾಂಕದ ಒಳಗೆ ಸರ್ಕಾರದ ನಿಲುವನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.

ಕೋವಿಡ್ ಕೇರ್ ಕೇಂದ್ರಗಳ ಪರಿಶೀಲನೆ ನಂತರ ಮಾತನಾಡಿದ ಅವರು, ಪ್ರಕರಣದಲ್ಲಿ ಅಧಿಕಾರಿಗಳ ಲೋಪದ ಸಂಬಂಧ ಹೈಕೋರ್ಟ್ ಮುಂದಿನ ವಿಚಾರಣೆ ನಡೆಸಲಿದ್ದು, ಆದೇಶದ ನಿರೀಕ್ಷೆಯಲ್ಲಿದ್ದೇವೆ, ಹೀಗಾಗಿ ಅದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದರು.

ರೋಗಿಗಳಿಗೆ ಚಿಕಿತ್ಸೆ ನೀಡಲು ಆಮ್ಲಜನಕ ಕಾನ್ಸಂಟ್ರೇಟರ್ ಮತ್ತು ಇತರ ಉಪಕರಣಗಳನ್ನು ಬಳಸಿಕೊಳ್ಳುವಂಚೆ ಆಸ್ಪತ್ರೆಗಳಿಗೆ ಮನವಿ ಮಾಡಿದರು. ವೈರಸ್ ಹರಡುವುದನ್ನು ನಿಯಂತ್ರಿಸಲು ಆರ್ ಎ ಟಿ ಮತ್ತು ಆರ್ಟಿ-ಪಿಸಿಆರ್ ಪರೀಕ್ಷೆಗಳನ್ನು ಹೆಚ್ಚಿಸಲು ನಿರ್ಧರಿಸಿದ್ದೇವೆ ಎಂದು ಕುಮಾರ್ ಹೇಳಿದರು.

ಮನೆಯಲ್ಲಿ ಸೌಲಭ್ಯಗಳ ಕೊರತೆಯಿರುವ ಎಲ್ಲಾ ರೋಗಿಗಳನ್ನು ಸಿಸಿಸಿಗಳಿಗೆ ಸ್ಥಳಾಂತರಿಸುವಂತೆ ನಾವು ಆಶಾ ಕಾರ್ಮಿಕರಿಗೆ ಸೂಚನೆ ನೀಡಿದ್ದೇವೆ ಎಂದು  ಸುರೇಶ್ ಕುಮಾರ್ ಹೇಳಿದರು.

ರಾಜ್ಯ ಸರ್ಕಾರವು ಪರೀಕ್ಷೆಯನ್ನು ತೀವ್ರವಾಗಿ ಕಡಿಮೆ ಮಾಡಿದೆ ಎಂಬ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಪವನ್ನು ಅಲ್ಲಗಳೆದ ಅವರು, ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಅವರು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದಾರೆ ಮತ್ತು ಈಗಾಗಲೇ ಪರೀಕ್ಷೆಗಳನ್ನು ಹೆಚ್ಚಿಸಿದ್ದಾರೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದ ನಂತರವೂ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ವಿಳಂಬ ಮಾಡುತ್ತಿರುವ ಬಗ್ಗೆ ಸರ್ಕಾರವನ್ನು ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಬ್ರಾರ್ ಅಹ್ಮದ್ ಅವರು ಪ್ರಶ್ನಿಸಿದ್ದಾರೆ. ನೈತಿಕ ಹೊಣೆ ಹೊತ್ತು ಜಿಲ್ಲಾ ಉಸ್ತುವಾರಿ ಸಚಿವರು ರಾಜೀನಾಮೆ ನೀಡಿಲ್ಲ, ಪರಿಹಾರ ಘೋಷಿಸುವಲ್ಲಿ ಸಹ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com