ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಘೋಷಿಸಿ: ಬಸವರಾಜ ಹೊರಟ್ಟಿ

ಕೋವಿಡ್ ಎರಡನೇ ಅಲೆಯಲ್ಲಿ ಹಲವು ಶಿಕ್ಷಕರು ಸೋಂಕಿಗೆ ಬಲಿಯಾಗಿದ್ದಾರೆ ಹೀಗಾಗಿ ಅವರನ್ನು ಕೊರೋನಾ ವಾರಿಯರ್ಸ್ ಎಂದು ಘೋಷಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ.
ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ

ಬೆಂಗಳೂರು: ಕೋವಿಡ್ ಎರಡನೇ ಅಲೆಯಲ್ಲಿ ಹಲವು ಶಿಕ್ಷಕರು ಸೋಂಕಿಗೆ ಬಲಿಯಾಗಿದ್ದಾರೆ ಹೀಗಾಗಿ ಅವರನ್ನು ಕೊರೋನಾ ವಾರಿಯರ್ಸ್ ಎಂದು ಘೋಷಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು ಕಳೆದ ಕೆಲ ವಾರಗಳಲ್ಲಿ ಉಪ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿದ್ದ ಹಲವು ಶಿಕ್ಷಕರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಶಿಕ್ಷಕರನ್ನು ಉಪ ಚುನಾವಣೆ ಕರ್ತವ್ಯದ ಜೊತೆಗೆ, ಜನಗಣತಿ, ಸೇರಿದಂತೆ ಹಲವು ಕೆಲಸಗಳಿಗೆ ನಿಯೋಜಿಸಲಾಗುತ್ತಿದೆ, ದುರಾದೃಷ್ಟವಶಾತ್ ಸರ್ಕಾರ ಅವರ ಬಗ್ಗೆ ಕಾಳಜಿ ತೋರಿಸುತ್ತಿಲ್ಲ, ಅವರಿಗೆ ಆರೋಗ್ಯ ಸೌಲಭ್ಯ ನೀಡುತ್ತಿಲ್ಲ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಎಲ್ಲಾ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಘೋಷಿಸಿ,ಸರ್ಕಾರ ಶಿಕ್ಷಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ಲಸಿಕೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಬಸವರಾಜ ಹೊರಟ್ಟಿ ಸುಮಾರು 42 ವರ್ಷಗಳಿಂದ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com