ಮೈಕ್ರೋ ಕಂಟೋನ್ಮೆಂಟ್ ಝೋನ್‌ಗಳನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಪ್ರಧಾನಿ ಮೋದಿ ಸೂಚನೆ: ಬೊಮ್ಮಾಯಿ

ರಾಜ್ಯದಲ್ಲಿ ಕೋವಿಡ್ ಹರಡದಂತೆ ತಡೆಯಲು ಮೈಕ್ರೋ ಕಂಟೋನ್ಮೆಂಟ್ ಝೋನ್ ಗಳನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಸವರಾಜ್ ಬೊಮ್ಮಾಯಿ
ಬಸವರಾಜ್ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹರಡದಂತೆ ತಡೆಯಲು ಮೈಕ್ರೋ ಕಂಟೋನ್ಮೆಂಟ್ ಝೋನ್ ಗಳನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜಿಲ್ಲಾಧಿಕಾರಿಗಳ ಜೊತೆ ನಡೆಸಿದ ಸಂವಾದದಲ್ಲಿ ಸಲಹೆ ನೀಡಿದ್ದು, ಪ್ರಧಾನಿಯವರ ವಿಡಿಯೋ ಸಂವಾದ ಬಹಳ ಉಪಯುಕ್ತವಾಗಿತ್ತು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ರಾಜ್ಯದ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ನಡೆಸಿದ ವಿಡಿಯೋ ಸಂವಾದದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಬೊಮ್ಮಾಯಿ, ಮೈಕ್ರೋ ಕಂಟೋನ್ಮೆಂಟ್ ಝೋನ್ ಗಳ ನಿರ್ವಹಣೆಯಿಂದ  ಸೋಂಕು ಹರೋಡುವುದನ್ನು ತಪ್ಪಿಸಬಹುದು. ಅನ್ಯ ರಾಜ್ಯಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ವಿನೂತನವಾಗಿ ತೆಗೆದುಕೊಂಡಿರು ಕ್ರಮಗಳು, ಯಶಸ್ವಿ ಪ್ರಯೋಗ ಏನು? ಅದನ್ನೆಲ್ಲವನ್ನು ಕರ್ನಾಟಕದಲ್ಲಿ ಅಳವಡಿಸಿಕೊಳ್ಳಬಹುದೇ ಎಂಬ ಬಗ್ಗೆ ಪ್ರಧಾನಿ ಚರ್ಚೆ ಮಾಡಿದರು ಎಂದರು.

ಕೊರೋನಾ ಗ್ರಾಮೀಣ ಭಾಗದಲ್ಲಿ ಹರಡುತ್ತಿದ್ದು, ಈ ಬಗ್ಗೆ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಗ್ರಾಮೀಣ ಭಾಗದ ಸ್ಥಿತಿಗತಿ ಬಗ್ಗೆ, ರಾಜ್ಯದ ಬಗ್ಗೆ ಡಿಸಿಎಂ ಅಶ್ವತ್ಥನಾರಾಯಾಣ್, ಬಿಬಿಎಂಪಿ ಆಯುಕ್ತರು ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿಯವರಿಗೆ ವಿವರಿಸಿದ್ದಾರೆ.

ಟ್ರಯಾಜ್ ಸೆಂಟರ್ ಲಭ್ಯತೆ ಬಗ್ಗೆ ಬೇರೆ ಬೇರೆ ರಾಜ್ಯದಲ್ಲಿ ಏನು ಮಾಡಲಾಗಿದೆ. ಗ್ರಾಮೀಣ ಮತ್ತು ಸೆಮಿ ಅರ್ಬನ್ ನಲ್ಲಿ ಕೊರೋನಾ ಹರಡುತ್ತಿದ್ದು, ಸೋಂಕು ನಿಯಂತ್ರಿಸಲು ಜನರನ್ನು ತೊಡಗಿಸಿಕೊಳ್ಳುವ ಕೆಲಸ ಆಗಬೇಕು. ಅಧಿಕಾರಿಗಳು, ಸಂಘ ಸಂಸ್ಥೆಗಳು, ಸ್ತ್ರೀ ಶಕ್ತಿ ಸಂಘಗಳನ್ನು, ಕೋವಿಡ್ ನಿಯಂತ್ರಣಕ್ಕೆ ಜಾಗೃತಿಗೆ ಬಳಸಿಕೊಳ್ಳುವ ಬಗ್ಗೆ ಚರ್ಚಿಸಲಾಗಿದೆ ಎಂದರು.

ಸಾಮಾಜಿಕ ಅಂತರ ಕಾಪಾಡುವ ಜೊತೆಗೆ ವೈದ್ಯಕೀಯ ಸಹಾಯ
ಗ್ರಾಮಗಳಲ್ಲಿ ಎಲ್ಲರೂ ಹೋಗುವ ಬದಲು, ಕೆಲವರೇ ಹೋಗಿ ಖರೀದಿ ಮಾಡುವುದು ಸೂಕ್ತ. ಸಾಮಾಜಿಕ ಅಂತರ ಕಾಪಾಡಿಕೊಂಡು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು.

ಹೆಲ್ತ್ ಇನ್ಫ್ರಾಸ್ಟ್ರಕ್ಚರ್ ಗೆ ಒತ್ತು ನೀಡುಬೇಕು. ಈ ಸಂಬಂಧ ಮಧ್ಯ ಪ್ರದೇಶದ ಗ್ರಾಮ ಪಂಚಾಯತಿಗಳಲ್ಲಿ ಉತ್ತಮ ಕೆಲಸ ಆಗಿದೆ. ಕೋವಿಡ್ ಬಗ್ಗೆ ಮಕ್ಕಳಲ್ಲಿ ಮನೋಬಲ ತುಂಬಿಸಲು, ಕಾರ್ಟೂನ್, ಹಾಡು, ಸ್ಥಳೀಯ ಭಾಷೆಯಲ್ಲಿ ಜಾಗೃತಿ ಮೂಡಿಸಬೇಕು.

ವ್ಯಾಕ್ಸಿನ್ ಉಳಿತಾಯ ಮಾಡುವ ಬಗ್ಗೆ ಕೂಡ ಮೋದಿ ಸಂವಾದದಲ್ಲಿ ಸಲಹೆ ನೀಡಿದ್ದು, ಜಿಲ್ಲಾಧಿಕಾರಿಗಳು ಫೀಲ್ಡ್ ಕಮಾಂಡರ್ ಆಗಿ ಕೆಲಸ ಮಾಡುವಂತೆ ಸೂಚಿಸಿದ್ದಾರೆಂದು ಬೊಮ್ಮಾಯಿ ಹೇಳಿದರು.

ಲಾಕ್ ಡೌನ್ ವಿಸ್ತಿಸಬೆಕೇ ಬೇಡವೇ ಎಂಬುದು ರಾಜ್ಯ ಸರ್ಕಾರಕ್ಕೆ ಬಿಟ್ಟಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಗೃಹ ಸಚಿವರು ಉತ್ತರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com