ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ನಾವೇ ಬಳಸಿಕೊಳ್ಳಲು ಕೇಂದ್ರದ ತಾತ್ವಿಕ ಒಪ್ಪಿಗೆ: ಶೆಟ್ಟರ್

ರಾಜ್ಯದಲ್ಲಿ ಉತ್ಪಾದನೆ ಆಗುವ ವೈದ್ಯಕೀಯ ಆಮ್ಲಜನಕವನ್ನು ರಾಜ್ಯದಲ್ಲೇ ಬಳಕೆ ಮಾಡಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಬೆಂಗಳೂರು: ರಾಜ್ಯದಲ್ಲಿ ಉತ್ಪಾದನೆ ಆಗುವ ವೈದ್ಯಕೀಯ ಆಮ್ಲಜನಕವನ್ನು ರಾಜ್ಯದಲ್ಲೇ ಬಳಕೆ ಮಾಡಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ರಾಜ್ಯದ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಉಸ್ತುವಾರಿ ಮತ್ತು ಬೃಹತ್‌ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದರು.

ವಿಧಾನಸೌಧದಲ್ಲಿ ರಾಜ್ಯದಲ್ಲಿನ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ ಸಚಿವ ಜಗದೀಶ್‌ ಶೆಟ್ಟರ್‌ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ಸಂಬಂಧ ಅಧಿಕೃತ ಆದೇಶ ಸದ್ಯದಲ್ಲೇ ಹೊರಬೀಳಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಉತ್ಪಾದನೆ ಆಗುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ಅವಕಾಶ ನೀಡುವಂತೆ ಕೇಂದ್ರ ಸಚಿವರಾದ ಪಿಯೂಷ್‌ ಗೋಯಲ್‌, ಪ್ರಹ್ಲಾದ್‌ ಜೋಶಿ ಹಾಗೂ ಸದಾನಂದಗೌಡ ಅವರೊಂದಿಗೆ ಹಲವಾರು ಹಂತದಲ್ಲಿ ಮಾತುಕತೆಯನ್ನು ನಡೆದಿದ್ದೆವು. ಅಲ್ಲದೆ, ಹಲವಾರು ಪತ್ರಗಳನ್ನು ಬರೆಯಲಾಗಿತ್ತು. ಈ ಮಾತುಕತೆ ಮತ್ತು ಸಮಾಲೋಚನೆಗೆ ಫಲ ದೊರೆತಿದೆ. ರಾಜ್ಯದಲ್ಲಿ ಉತ್ಪಾದನೆ ಆಗುವ ಆಮ್ಲಜನಕ ವನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ತಾತ್ವಿಕ ಒಪ್ಪಿಗೆಯನ್ನು ನೀಡಿದೆ. ಸದ್ಯದಲ್ಲೇ ಅಧಿಕೃತ
ಘೋಷಣೆ ಹೊರಡಿಸಲಿದ್ದಾರೆ ಎಂದು ಹೇಳಿದರು.

ಕೇಂದ್ರ ಸರಕಾರ ಬಹರೈನ್ ಮತ್ತು ಕುವೈತ್‌ನಿಂದ 180 ಮೆಟ್ರಿಕ್‌ ಟನ್‌ ಆಮ್ಲಜನಕವನ್ನು ರಾಜ್ಯಕ್ಕೆ ನೀಡಿದೆ.  ಅಲ್ಲದೆ, ರೈಲು ಮೂಲಕ ಮೇ 11 ರಂದು ಜೆಮ್ ಶೆಡ್‌ಪುರದಿಂದ 120 ಎಂ.ಟಿ, ಮೇ 15 ರಂದು ಕಳಿಂಗಾನಗರದಿಂದ 180 ಎಂ.ಟಿ ಆಮ್ಲಜನಕ ಸರಬರಾಜು ಆಗಿದೆ. ಅಲ್ಲದೆ, ಮುಂದಿನ  ಒಂದು ವಾರದಲ್ಲಿ ಸುಮಾರು 320 ದ್ರವೀಕೃತ ಆಮ್ಲಜನಕ ರವಾನೆ ಆಗುವ ನಿರೀಕ್ಷೆ ಇದೆ. 200 ಸಿಲಿಂಡರ್‌ಗಳನ್ನು ಕೇಂದ್ರ ಸರಕಾರ ರಾಜ್ಯಕ್ಕೆ ನೀಡಿದೆ ಎಂದರು.

ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಸಾರ್ವಜನಿಕ ಉದ್ದಿಮೆಗಳ ಸಹಕಾರದಿಂದ ಒಟ್ಟಾರೆಯಾಗಿ 104 ಆಮ್ಲಜನಕ ಉತ್ಪಾದನಾ ಘಟಕಗಳನ್ನು ಪ್ರಾರಂಭಿಸಲಿದ್ದೇವೆ. ರಾಜ್ಯದಲ್ಲಿ ಆಮ್ಲಜನಕ ಉತ್ಪಾದನೆ ಹಾಗೂ ನೈಟ್ರೋಜನ್‌ ಪಿಎಸ್‌ಎ ಉತ್ಪಾದನಾ ಘಟಕಗಳನ್ನು ಆಮ್ಲಜನಕ ಉತ್ಪಾದನೆಗೆ ಪರಿವರ್ತಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com