ಮಣಿಪಾಲ್ ಆಸ್ಪತ್ರೆಯ ಏಳು ರೋಗಿಗಳಿಗೆ ಬ್ಲ್ಯಾಕ್ ಫಂಗಸ್: ಖಚಿತಪಡಿಸಿದ ಜಿಲ್ಲಾ ಆರೋಗ್ಯ ಅಧಿಕಾರಿ

ಮಣಿಪಾಲ್‌ನ ಕಸ್ತೂರಿ ಬಾ ವೈದ್ಯಕೀಯ ಕಾಲೇಜು(ಕೆಎಂಸಿ) ಆಸ್ಪತ್ರೆಯಲ್ಲಿ ಕೋವಿಡ್ -19ಗೆ ಚಿಕಿತ್ಸೆ ಪಡೆಯುತ್ತಿರುವ ಏಳು ರೋಗಿಗಳಲ್ಲಿ ಕಪ್ಪು ಶಿಲೀಂಧ್ರ (ಮ್ಯೂಕಾರ್ಮೈಕೋಸಿಸ್) ಸೋಂಕು ಪತ್ತೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ಮಣಿಪಾಲ್‌ನ ಕಸ್ತೂರಿ ಬಾ ವೈದ್ಯಕೀಯ ಕಾಲೇಜು(ಕೆಎಂಸಿ) ಆಸ್ಪತ್ರೆಯಲ್ಲಿ ಕೋವಿಡ್ -19ಗೆ ಚಿಕಿತ್ಸೆ ಪಡೆಯುತ್ತಿರುವ ಏಳು ರೋಗಿಗಳಲ್ಲಿ ಕಪ್ಪು ಶಿಲೀಂಧ್ರ (ಮ್ಯೂಕಾರ್ಮೈಕೋಸಿಸ್) ಸೋಂಕು ಪತ್ತೆಯಾಗಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಅಧಿಕಾರಿ(ಡಿಎಚ್‌ಒ) ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

ಐದು ಮಹಿಳೆಯರು ಮತ್ತು ಇಬ್ಬರು ಪುರುಷರಲ್ಲಿ ಕಪ್ಪು ಶಿಲೀಂಧ್ರ ಪತ್ತೆಯಾಗಿದ್ದು, ಪ್ರಸ್ತುತ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೋಗಿಗಳಿಗೆ ಅನಿಯಂತ್ರಿತ ಮಧುಮೇಹವೂ ಇದೆ ಎಂದು ಸೂಡಾ ಅವು ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿವಿಧ ಆರೋಗ್ಯ ಸಮಸ್ಯೆಗಳ ಚಿಕಿತ್ಸೆಗಾಗಿ ಕೆಎಂಸಿಗೆ ದಾಖಲಾದ ಈ ರೋಗಿಗಳಿಗೆ ಈ ಹಿಂದೆ ಕೋವಿಡ್-19 ಪಾಸಿಟಿವ್ ದಢಪಟ್ಟಿತ್ತು. ಅವರು ಚಿತ್ರದುರ್ಗ, ಧಾರವಾಡ, ಹರಿಹರ, ದಾವಣಗೆರೆ, ಶಿವಮೊಗ್ಗ, ರಾಣೆಬೆನ್ನುರು ಮತ್ತು ಕೊಪ್ಪಳ ಮೂಲದವರಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಯಾವುದೇ ಕಪ್ಪು ಶಿಲೀಂಧ್ರ ಪ್ರಕರಣ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com