ಆರೋಗ್ಯ ಸಚಿವ ಡಾ. ಕೆ. ಸುಧಾಕರ್
ಆರೋಗ್ಯ ಸಚಿವ ಡಾ. ಕೆ. ಸುಧಾಕರ್

ಕಪ್ಪು ಶಿಲೀಂದ್ರ ಸೋಂಕಿಗೆ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ: ಡಾ. ಕೆ.ಸುಧಾಕರ್

ಕೊರೋನಾ ಸೋಂಕಿನಿಂದ ಗುಣಮುಖರಾದ ನಂತರ ಕೆಲವರಲ್ಲಿ ಕಂಡು ಬರುತ್ತಿರುವ ಕಪ್ಪು ಶಿಲೀಂದ್ರ ಸೋಂಕಿನ ಚಿಕಿತ್ಸೆಗೆ ಅಂತರಶಿಸ್ತೀಯ ವಿಧಾನದ ಅವಶ್ಯಕತೆಯಿದ್ದು ಇಎನ್‌ಟಿ ತಜ್ಞರು, ನೇತ್ರಶಾಸ್ತ್ರಜ್ಞರು, ಅರಿವಳಿಕೆ ವೈದ್ಯರು ಮತ್ತು ಮ್ಯಾಕ್ಸಿಲೊಫೇಶಿಯಲ್ ಶಸ್ತ್ರಜ್ಞರ ಅಗತ್ಯವಿದೆ ಎಂದು ಸಚಿವ ಡಾ. ಕೆ.ಸುಧಾಕರ್‌ ಹೇಳಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕಿನಿಂದ ಗುಣಮುಖರಾದ ನಂತರ ಕೆಲವರಲ್ಲಿ ಕಂಡು ಬರುತ್ತಿರುವ ಕಪ್ಪು ಶಿಲೀಂದ್ರ ಸೋಂಕಿನ ಚಿಕಿತ್ಸೆಗೆ ಅಂತರಶಿಸ್ತೀಯ ವಿಧಾನದ ಅವಶ್ಯಕತೆಯಿದ್ದು ಇಎನ್‌ಟಿ ತಜ್ಞರು, ನೇತ್ರಶಾಸ್ತ್ರಜ್ಞರು, ಅರಿವಳಿಕೆ ವೈದ್ಯರು ಮತ್ತು ಮ್ಯಾಕ್ಸಿಲೊಫೇಶಿಯಲ್ ಶಸ್ತ್ರಜ್ಞರ ಅಗತ್ಯವಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಪ್ಪು ಶಿಲೀಂದ್ರ ಸೋಂಕಿನ ಚಿಕಿತ್ಸೆಗೆ ಅಗತ್ಯವಿರುವ ಈ ಎಲ್ಲ ತಜ್ಞ ವೈದ್ಯರುಗಳ ತಂಡ ಎಲ್ಲ ಸರ್ಕಾರಿ ಜಿಲ್ಲಾಸ್ಪತ್ರೆಗಳು ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವುದರಿಂದ ಸೋಂಕಿತರು ಈ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು ಎಂದಿದ್ದಾರೆ. 

ಕಪ್ಪು ಶಿಲೀಂದ್ರ ಸೋಂಕನ್ನು ಈಗಾಗಲೇ ಸೂಚಿತ ರೋಗ ಎಂದು ಘೋಷಿಸಲಾಗಿದ್ದು, ಈ ಸೋಂಕಿಗೆ ಚಿಕಿತ್ಸೆ ನೀಡುವ ಸಾಮರ್ಥ್ಯ ಇರುವ ಯಾವುದೇ ಆಸ್ಪತ್ರೆ ಅಥವಾ ವೈದ್ಯಕೀಯ ಸಂಸ್ಥೆಗಳು ಸೋಂಕಿತರಿಗೆ ಚಿಕಿತ್ಸೆ,ಆಸ್ಪತ್ರೆ ದಾಖಲಾತಿ ನಿರಾಕರಿಸಬಾರದು. ಈ ನಿಟ್ಟಿನಲ್ಲಿ ಅತೀ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com