ಬ್ಲ್ಯಾಕ್ ಫಂಗಸ್ ಸಾಂಕ್ರಾಮಿಕ ರೋಗವಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ: ಸಚಿವ ಸುಧಾಕರ್

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಂಡುಬಂದಿದ್ದು, ಇದು ಸಾಂಕ್ರಾಮಿಕ ರೋಗವಲ್ಲ. ಆದ್ದರಿಂದ ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್....
ಸಚಿವ ಸುಧಾಕರ್
ಸಚಿವ ಸುಧಾಕರ್

ದಾವಣಗೆರೆ: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಂಡುಬಂದಿದ್ದು, ಇದು ಸಾಂಕ್ರಾಮಿಕ ರೋಗವಲ್ಲ. ಆದ್ದರಿಂದ ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿಯೂ ಈವರೆಗೆ 15 ರಿಂದ 20 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಸೋಂಕಿಗೆ ಚಿಕಿತ್ಸೆ ದೊರಕುವಂತೆ ಮಾಡಲಾಗಿದೆ. ಸೋಂಕು ನಿವಾರಣೆಗೆ ಅಗತ್ಯವಿರುವ ಔಷಧಿ ಪೂರೈಕೆಗೂ ಕ್ರಮ ವಹಿಸಲಾಗಿದ್ದು, ಇದು ಸಾಂಕ್ರಾಮಿಕ ರೋಗವಲ್ಲ, ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದರು.

ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು, ಕೋವಿಡ್ ಚಿಕಿತ್ಸೆಯಲ್ಲಿ ಅತಿಯಾದ ಸ್ಟಿರಾಯ್ಡ್ ಬಳಕೆ, ಅನಿಯಂತ್ರಿತ ಮಧುಮೇಹ ಮುಂತಾದ ಕಾರಣಗಳಿಂದ ಈ ಸೋಂಕು ಉಂಟಾಗುತ್ತಿದೆ. ಕೋವಿಡ್ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆ ಹೊಂದಿರುವವರ ಆರೋಗ್ಯ ತಪಾಸಣೆಗೆ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಬಿಡುಗಡೆಯಾದ ದಿನದಿಂದ 3, 7, 15 ದಿನಗಳ ಅವಧಿಯಲ್ಲಿ ಅವರಿಗೆ ಯಾವ ಬಗೆಯ ಪರೀಕ್ಷೆ ಮಾಡಬೇಕು ಎಂಬುದನ್ನು ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ ಎಂದರು.

ಬ್ಲ್ಯಾಕ್ ಫಂಗಸ್ ಸೋಂಕಿನ ಬಗ್ಗೆ ಮಾಧ್ಯಮಗಳು ದಯವಿಟ್ಟು ವೈಭವೀಕರಿಸಬಾರದು. ಈಗಾಗಲೇ ಕೋವಿಡ್‍ನಿಂದ ಮಾನಸಿಕವಾಗಿ ಆತಂಕದಲ್ಲಿರುವ ಸಮಾಜದಲ್ಲಿ ಇನ್ನಷ್ಟು ಭಯದ ವಾತಾವರಣ ಕಲ್ಪಿಸಬೇಡಿ ಎಂದು ಅವರು ಮನವಿ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com