ಕಿಮ್ಸ್ ನಲ್ಲಿ 78 ಬ್ಲ್ಯಾಕ್​ ಫಂಗಸ್​​​ ರೋಗಿಗಳಿಗೆ ಚಿಕಿತ್ಸೆ: ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 77 ಹಾಗೂ ಹೊರ ರಾಜ್ಯದ ಓರ್ವ ಸೇರಿ ಒಟ್ಟು 78 ಬ್ಲ್ಯಾಕ್​ ಫಂಗಸ್​ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಶನಿವಾರ ತಿಳಿಸಿದ್ದಾರೆ.
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ

ಧಾರವಾಡ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 77 ಹಾಗೂ ಹೊರ ರಾಜ್ಯದ ಓರ್ವ ಸೇರಿ ಒಟ್ಟು 78 ಬ್ಲ್ಯಾಕ್​ ಫಂಗಸ್​ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಶನಿವಾರ ತಿಳಿಸಿದ್ದಾರೆ.

ಕಿಮ್ಸ್ ಆಸ್ಪತ್ರೆಯಲ್ಲಿ ಧಾರವಾಡ ಜಿಲ್ಲೆಯ 18 ಸೋಂಕಿತರು ಮಾತ್ರ ಇದ್ದಾರೆ. ಉಳಿದಂತೆ ಬೆಳಗಾವಿ 16, ಬಾಗಲಕೋಟೆ 16, ಗದಗ 5, ಕೊಪ್ಪಳ 5, ರಾಯಚೂರು 4, ಹಾವೇರಿ 4, ವಿಜಯಪುರ 4 ಹಾಗೂ ಬಳ್ಳಾರಿ 2, ಉತ್ತರ ಕನ್ನಡ 1, ತುಮಕೂರ 1, ಚಿತ್ರದುರ್ಗ ಒಬ್ಬರು ಮತ್ತು ಹೊರ ರಾಜ್ಯದ ಓರ್ವ ಬ್ಲ್ಯಾಕ್​  ಫಂಗಸ್ ಸೋಂಕಿತ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಇಂದು ಬೆಳಗ್ಗೆ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್)ಗೆ ಭೇಟಿ ನೀಡಿದ್ದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅವರು, ಕಿಮ್ಸ್ ಕೋವಿಡ್‌ ವಿಷಯದಲ್ಲಿ ನಿರೀಕ್ಷೆಗೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com