ಕೋವಿಡ್ 19: ಇಂದು 626 ಮಂದಿ ಬಲಿ, ಬೆಂಗಳೂರಿನಲ್ಲಿ 7,494 ಸೇರಿ 25,979 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು ಒಂದೇ ದಿನ 626 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು ಒಂದೇ ದಿನ 626 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. 

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 25,979 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 24,24,904ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿದ್ದು ಇಂದು ದಾಖಲೆಯ 35,573 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಆ ಮೂಲಕ ಚೇತರಿಕೆ ಸಂಖ್ಯೆ 19,26,615ಕ್ಕೆ ಏರಿಕೆಯಾಗಿದೆ. 

ಬೆಂಗಳೂರಿನಲ್ಲಿ ಇಂದು 7,494 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,19,552ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 362 ಮಂದಿ ಬಲಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ ಸಾವಿನ ಸಂಖ್ಯೆ 25,282 ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com