
ಎಂ.ರಾಜಗೋಪಾಲ್
ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರಾಜ್ಯಸಭಾ ಸದಸ್ಯ, ಎಂ. ರಾಜಗೋಪಾಲ್ ನಿಧನರಾಗಿದ್ದಾರೆ.
ಕನಕಪುರ ಮೂಲದ ಎಂ. ರಾಜಗೋಪಾಲ್ ಪ್ರಸ್ತುತ ಬೆಂಗಳೂರಿನ ನಂದಿನಿ ಬಡಾವಣೆಯಲ್ಲಿ ವಾಸವಿದ್ದರು. ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ನಿಧನವಾಗಿದ್ದಾರೆ.
ರಾಜಗೋಪಾಲ್ ಕಾಂಗ್ರೆಸ್ ಹಿರಿಯ ನಾಯಕರಾಗಿದ್ದ ಜಾಫ ಶರೀಫ್, ಡಿಕೆ ಶಿವಕುಮಾರ್, ಡಿಕೆ ಸುರೇಶ್, ಗುಂಡೂರಾವ್ ಅವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡಿದ್ದರು.
ರಾಜಗೋಪಾಲ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದು "ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ರಾಜ್ಯಸಭಾ ಸದಸ್ಯ, ಸಜ್ಜನ ಹಾಗೂ ನಿಷ್ಕಲ್ಮಶ ಮನಸ್ಸಿನ ರಾಜಕಾರಣಿ ಎಂ. ರಾಜಗೋಪಾಲ್ ಅವರ ನಿಧನ ನೋವಿನ ಸಂಗತಿ.
ಅವರ ಆತ್ಮಕ್ಕೆ ಶಾತಿ ದೊರಕಲಿ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿ ಬಳಗಕ್ಕೆ ದುಃಖ ಭರಿಸುವ ಶಕ್ತಿ ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ." ಎಂದು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ರಾಜ್ಯಸಭಾ ಸದಸ್ಯ, ಸಜ್ಜನ ಹಾಗೂ ನಿಷ್ಕಲ್ಮಶ ಮನಸ್ಸಿನ ರಾಜಕಾರಣಿ ಎಂ. ರಾಜಗೋಪಾಲ್ ಅವರ ನಿಧನ ನೋವಿನ ಸಂಗತಿ.
— DK Shivakumar (@DKShivakumar) May 23, 2021
ಅವರ ಆತ್ಮಕ್ಕೆ ಶಾತಿ ದೊರಕಲಿ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿ ಬಳಗಕ್ಕೆ ದುಃಖ ಭರಿಸುವ ಶಕ್ತಿ ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/vIeJlA9Zp7