ದುಡಿದವರಿಗೆ ಗೌರವಧನ ಕೊಡಲು ಮೀನಾಮೇಷ ಎಣಿಸುತ್ತಿರುವ ಸರ್ಕಾರ 1250 ಕೋಟಿ ರೂ. ಪ್ಯಾಕೇಜ್ ನೀಡುವುದು ಭ್ರಮೆ?

ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಬೇಕು. ಅವರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ  ಈ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಬೇಕು. ಅವರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ ಈ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಮಾಜಿ ಕುಮಾರಸ್ವಾಮಿ, ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ. ಇನ್ನೂ ಸಾವಿರಾರು ಶಿಕ್ಷಕರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡುವಂತೆ ನಾನು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ. 

145ಕ್ಕೂ ಹೆಚ್ಚು ಶಿಕ್ಷಕರು ಹೈದರಾಬಾದ್-ಕರ್ನಾಟಕದಲ್ಲಿ ಅಂದರೆ ಕಲ್ಯಾಣ ಕರ್ನಾಟಕದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರ ಕೊಟ್ಟ ಆದೇಶ ಪಾಲಿಸಿ ರಾಜ್ಯದಾದ್ಯಂತ ಇನ್ನೂ ಹಲವು ಶಿಕ್ಷಕರ ಪ್ರಾಣ ಹೋಗಿದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಕೊರೋನಾ ವಾರಿಯರ್ಸ್ ಎಂದು ಬಾಯಿಮಾತಿನಲ್ಲಿ ಹೇಳಿದ ಸರ್ಕಾರ ಪ್ರತಿ ತಿಂಗಳು ಆಶಾ ಕಾರ್ಯಕರ್ತೆಯರಿಗೆ ಸಕಾಲಕ್ಕೆ ಗೌರವಧನ ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ದುಡಿದವರಿಗೆ ಗೌರವಧನ ಕೊಡಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ 1250 ಕೋಟಿ ರೂಗಳ ಪ್ಯಾಕೇಜನ್ನು ಅನುಷ್ಠಾನಗೊಳಿಸುತ್ತದೆ ಎಂಬುದು ಭ್ರಮೆ ಅಲ್ಲದೆ ಮತ್ತೇನು?

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com