ಲಸಿಕೆ ದಂಧೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ

ಕೋವಿಡ್‌ ಲಸಿಕೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟು ದಂಧೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. 
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೋವಿಡ್‌ ಲಸಿಕೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟು ದಂಧೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. 

ಲಸಿಕೆಯನ್ನು ಅಕ್ರಮ ದಾಸ್ತಾನು ಮಾಡಿರುವುದು ಮತ್ತು ಸಾಗಾಟ ಮಾಡಿರುವುದು ಗಮನಕ್ಕೆ ಬಂದಿದೆ. ಈ ಅಪರಾಧದಲ್ಲಿ ಆಸ್ಪತ್ರೆಯ ವೈದ್ಯರೂ ಮತ್ತು ಸಿಬ್ಬಂದಿ ಶಾಮೀಲಾಗಿರುವುದೂ ಪತ್ತೆ ಆಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಅಕ್ರಮವಾಗಿ ಸಂಗ್ರಹಿಸಿಡುವುದು ಅಕ್ಷಮ್ಯ ಅಪರಾಧ. ಜನರ ಜೀವ ಉಳಿಸುವ ಲಸಿಕೆಯನ್ನು ಹಣದ ಆಸೆಗೆ ಅಕ್ರಮವಾಗಿ ಮಾರಾಟ ಮಾಡಿದರೆ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದೂ ಎಚ್ಚರಿಸಿದರು.

ರೆಮಿಡಿಸಿವಿರ್‌ ಇಂಜಕ್ಷನ್ ವಿಷಯದಲ್ಲಿ ಈ ರೀತಿ ಮಾಡಿದ್ರು, ಆ ನಂತರ ಅದು ಸರಿ ಹೋಗಿದೆ, ಇವಾಗ ವ್ಯಾಕ್ಸಿನೇಷನ್‌ ಅಕ್ರಮ ದಂಧೆ ನಡೆದರೆ ಅದನ್ನೂ ಬಿಡಲ್ಲ. ಇಂತವರ ಮೇಲೆ ಕಠಿಣ ಕ್ರಮ ಕೈಗೊಳ್ತೇವೆ ಎಂದರು.

ರಾಜ್ಯದಲ್ಲಿ ವ್ಯಾಕ್ಸಿನೇಷನ್‌ ಕೊರತೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೊರತೆ ನೀಗಿಸಲು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗ್ತಿದೆ. ಖಾಸಗಿಯವರು ಹೆಚ್ಚಿನ ದರದಲ್ಲಿ ವ್ಯಾಕ್ಸಿನೇಷನ್‌ ನೀಡುವ ಸಂಬಂಧ ಕೇಂದ್ರ ಒಂದು ನಿಯಮ ರೂಪಿಸುವ ಅಗತ್ಯ ಇದೆ ಎಂದರು.

ಸೋಮವಾರದಿಂದ ಎರಡನೇ ಹಂತದ ಲಾಕ್ ಡೌನ್ ವಿಸ್ತರಣೆಯಾಗಿದೆ. ಇನ್ನಷ್ಟು ಬಿಗಿ ಕ್ರಮಕ್ಕೆ ಸೂಚನೆಯನ್ನು ರಾಜ್ಯದ ಪೊಲೀಸರಿಗೆ ನೀಡಲಾಗಿದೆ. ಅನಗತ್ಯವಾಗಿ ಓಡಾಡುವ ವಾಹನಗಳ ಸೀಜ್ ಮಾಡುವ ಪ್ರಕರಣ ಮುಂದುವರೆಸಲಾಗುತ್ತೆ. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಓಡಾಡುವವರನ್ನು ಸುಮ್ಮನೆ ಬಿಡಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಲಾಕ್ ಡೌನ್ ಪರಿಣಾಮಕಾರಿಯಾಗಿದೆ, ಜನರು ನಿಯಮಗಳನ್ನು ಪಾಲಿಸುತ್ತಿದ್ದಾರೆ. ಆದರೆ, ಪಟ್ಟಣ ಪ್ರದೇಶದಲ್ಲಿ ಜನರು ಮಾರ್ಗಸೂಚಿ ಉಲ್ಲಂಘಿಸುತ್ತಿದ್ದಾರೆ. ಆದ್ದರಿಂದ, ಬಿಗಿಯಾದ ಕ್ರಮಗಳನ್ನು ತಗೆದುಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಅನಗತ್ಯವಾಗಿ ಓಡಾಡುವವರನ್ನು ಬಿಡುವುದಿಲ್ಲ. ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗುವುದು ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com