ದಂಡ ಸಂಗ್ರಹಿಸಿದರೆ ಸಾಕೆ? ನಿಯಮ ಉಲ್ಲಂಘಿಸಿದವರ ವಿರುದ್ಧ ಎಫ್ಐಆರ್ ಏಕಿಲ್ಲ: ಬೆಳಗಾವಿ ಪೊಲೀಸ್ ಆಯುಕ್ತರ ವಿರುದ್ದ 'ಹೈ' ಗರಂ!

ಕೋವಿಡ್‌ ನಿಯಮ ಉಲ್ಲಂಘಿಸಿ ಜನವರಿ 17ರಂದು ಬೆಳಗಾವಿಯಲ್ಲಿ ನಡೆಸಿರುವ ಬಿಜೆಪಿ ಸಮಾವೇಶದ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳದಿರುವ ಬಗ್ಗೆ ಜಿಲ್ಲಾ ಪೊಲೀಸ್ ಆಯುಕ್ತರ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು. 
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಕೋವಿಡ್‌ ನಿಯಮ ಉಲ್ಲಂಘಿಸಿ ಜನವರಿ 17ರಂದು ಬೆಳಗಾವಿಯಲ್ಲಿ ನಡೆಸಿರುವ ಬಿಜೆಪಿ ಸಮಾವೇಶದ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳದಿರುವ ಬಗ್ಗೆ ಜಿಲ್ಲಾ ಪೊಲೀಸ್ ಆಯುಕ್ತರ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು. 

ತಪ್ಪಿತಸ್ಥರ ವಿರುದ್ಧ ದಂಡ ವಿಧಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಸಲ್ಲಿಸಿದ್ದ ಪ್ರಮಾಣ ಪತ್ರ ಪರಿಶೀಲಿಸಿದ ಪೀಠ, ‍‘ಪೊಲೀಸ್ ಆಯುಕ್ತರಿಗೆ ಕಾಯ್ದೆಯ ಬಗ್ಗೆ ಅರಿವಿದ್ದಂತೆ ಕಾಣಿಸುತ್ತಿಲ್ಲ. ಆಯೋಜಕರ ವಿರುದ್ಧ ಎಫ್‌ಐಆರ್ ದಾಖಲಿಸಿಲ್ಲ. ಕಾಯ್ದೆಯ ನಿಯಮಗಳನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಈ ಪ್ರಮಾಣ ಪತ್ರವನ್ನು ಒಪ್ಪಲು ಆಗುವುದಿಲ್ಲ. ಜೂ.3ರೊಳಗೆ ಹೊಸದಾಗಿ ಪ್ರಮಾಣ ಪತ್ರ ಸಲ್ಲಿಸಬೇಕು’ ಎಂದು ತಿಳಿಸಿತು.

ಸಮಾರಂಭದಲ್ಲಿ ಭಾಗಿಯಾಗಿದ್ದ ಪ್ರತಿಯೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಈ ಹಿಂದೆ ನೀಡಿದ್ದ ಆದೇಶ ಪಾಲಿಸಿರುವ ಬಗ್ಗೆ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಜೂ.4ಕ್ಕೆ ಮುಂದೂಡಿತು. ಜನವರಿ 17 ರಂದು ನಡೆದ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಿಎಂ ಯಡಿಯೂರಪ್ಪ ಭಾಗಿಯಾಗಿದ್ದರು.

ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠವು ಜನವರಿ 17 ರಂದು ನಡೆದ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮಗಳ ಉಲ್ಲಂಘನೆಗೆ ಕೈಗೊಂಡ ಕ್ರಮವನ್ನು ವಿವರಿಸಿ ಎಂದು ಬೆಳಗಾವಿ ಪೊಲೀಸ್ ಆಯುಕ್ತ ಕೆ ತ್ಯಾಗರಾಜನ್ ಅವರಿಗೆ ಸೂಚಿಸಿದೆ.

ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ನಡೆಸಿದ ಸಭೆಯನ್ನು ಆಯುಕ್ತರು ಲಘುವಾಗಿ ಪರಿಗಣಿಸಿದ್ದಾರೆ. ಕೇವಲ 20.900 ರು ದಂಡ ವಸೂಲಿ ಮಾಡಿ ಅಷ್ಟಕ್ಕೆ ತೃಪ್ತರಾಗಿದ್ದಾರೆ. ಎಫ್ ಐ ಆರ್ ಕೂಡ ದಾಖಲಿಸಿಲ್ಲ ಎಂದು ಪ್ರಶ್ನಿಸಿರುವ ನ್ಯಾಯಾಲಯ ಜೂನ್ 3ರೊಳಗೆ ಹೊಸ ಅಫಿಡವಿಟ್ ಸಲ್ಲಿಸುವಂತೆ ಆದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com