ಹೊಸ ಮೆಟ್ರೋ ಮಾರ್ಗದಲ್ಲಿ ಸಿಎಂ ಯಡಿಯೂರಪ್ಪ ಟ್ರೈಯಲ್‌ ರೈಡ್‌: ಸಾಮಾಜಿಕ ಅಂತರ ಗಾಳಿಗೆ ತೂರಿದ ಅಧಿಕಾರಿಗಳು!

ಸರ್ಕಾರದ ನಿಯಮಗಳು ಸಾರ್ವಜನಿಕರಿಗಷ್ಟೇ, ಅಧಿಕಾರಿಗಳಗಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೆಂಗೇರಿ ಮಾರ್ಗದ ಮೆಟ್ರೋ ರೈಲಿನಲ್ಲಿ ಸಂಚಾರ ನಡೆಸಿ ಪರಿಶೀಲನೆ ನಡೆಸಿದ್ದು, ಈ ವೇಳೆ ಅಧಿಕಾರಿಗಳು ಕೊರೋನಾ ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿತು. 
ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವ ಸಿಎಂ ಯಡಿಯೂರಪ್ಪ ಹಾಗೂ ಸಚಿವರು
ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವ ಸಿಎಂ ಯಡಿಯೂರಪ್ಪ ಹಾಗೂ ಸಚಿವರು

ಬೆಂಗಳೂರು: ಸರ್ಕಾರದ ನಿಯಮಗಳು ಸಾರ್ವಜನಿಕರಿಗಷ್ಟೇ, ಅಧಿಕಾರಿಗಳಗಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೆಂಗೇರಿ ಮಾರ್ಗದ ಮೆಟ್ರೋ ರೈಲಿನಲ್ಲಿ ಸಂಚಾರ ನಡೆಸಿ ಪರಿಶೀಲನೆ ನಡೆಸಿದ್ದು, ಈ ವೇಳೆ ಅಧಿಕಾರಿಗಳು ಕೊರೋನಾ ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿತು. 

ವಿಧಾನಸೌಧದ ಬಳಿಯಿರುವ ಡಾ.ಬಿ.ಆರ್.ಅಂಬೇಡ್ಕರ್ ನಿಲ್ದಾಣದಿಂದ ವಿಶೇಷ ಮೆಟ್ರೋ ಏರಿದ ಮುಖ್ಯಮಂತ್ರಿಗಳು ಅಲ್ಲಿಂದ ನಾಯಂಡಹಳ್ಳಿ, ರಾಜರಾಜೇಶ್ವರಿ ನಿಲ್ದಾಣ, ಕೆಂಗೇರಿ ನಿಲ್ದಾಣಗಳನ್ನು ಪರಿಶೀಲಿಸಿದರು. ಈ ವೇಳೆ ಮುಖ್ಯಮಂತ್ರಿಗಳ ಜೊತೆಗೆ ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವಸತಿ ಸಚಿವ ವಿ.ಸೋಮಣ್ಣ, ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರು ಜೊತೆಗಿದ್ದರು.

ಮೆಟ್ರೋ ರೈಲಿನಲ್ಲಿ ಎಲ್ಲಾ ಸಚಿಚವರು ಮುಖ್ಯಮಂತ್ರಿಗಳೊಂದಿಗೆ ಸ್ವಲ್ಪವೇ ಅಂತರದಲ್ಲಿ ಪ್ರಯಾಣ ಮಾಡಿದರು. ಎಲ್ಲಿಯೂ ಸಾಮಾಜಿಕ ಅಂತರ ಕಂಡು ಬರಲೇ ಇಲ್ಲ. 

ಇನ್ನು ರೈಲಿನಲ್ಲಿ ದ್ವಾರದಲ್ಲಿಯೇ ಮೆಟ್ರೋ ಅಧಿಕಾರಿಗಳು ನಿಂತುಕೊಂಡಿದ್ದರೂ, ಸಾಮಾಜಿಕ ಅಂತರ ಕಂಡು ಬಾರದಿದ್ದರೂ ಯಾರೊಬ್ಬರೂ ತಲೆಕೆಡಿಸಿಕೊಳ್ಳಲಿಲ್ಲ. ಕೇವಲ ಮೆಟ್ರೋದಲ್ಲಿ ಸಂಚಾರ ಮಾಡುವಾಗ ಅಷ್ಟೇ ಅಲ್ಲದೆ, ಯಡಿಯೂರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡುವಾಗಲೂ ಸಾಮಾಜಿಕ ಅಂತರಗಳು ಕಂಡು ಬರಲಿಲ್ಲ. 

ಮುಖ್ಯಮಂತ್ರಿಗಳು ಪ್ರಯಾಣಿಸುತ್ತಿದ್ದ ಮೆಟ್ರೋ ರೈಲಿನಲ್ಲಿ ಹೋಗಬೇಕೆಂದು ಬಯಸಿದ್ದೆ. ಆದರೆ, ರೈಲಿನಲ್ಲಿದ್ದ ಜನ ದಟ್ಟಣೆ ನೋಡಿ ಸೋಂಕು ತಗುಲುವ ಭೀತಿಯಿಂದ ನಾನು ಹೋಗಲಿಲ್ಲ ಎಂದು ಮೆಟ್ರೋ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಈ ನಡುವೆ ಈ ಸಂಬಂಧ ಬಿಎಂಆರ್‌ಸಿಎಲ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿ ಎಲ್ ಯಶ್ವಂತ್ ಚವಾಣ್, ಬಿಎಂಆರ್‌ಸಿಎಲ್ ನಿರ್ವಾಹಕ ನಿರ್ದೇಶಕ ಶಂಕರ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಲು ಸಂಪರ್ಕಕ್ಕೆ ಸಿಕ್ಕಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com