ಕೋವಿಡ್-19: ರಾಜ್ಯದಲ್ಲಿ ಇಂದು 476 ಸಾವು; 24,214 ಮಂದಿಗೆ ಪಾಸಿಟಿವ್, 31,459 ಡಿಸ್ಚಾರ್ಜ್!

ರಾಜ್ಯದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಕ್ರಮೇಣ ಕಡಿಮೆಯಾಗುತ್ತಿದ್ದು ಇಂದು 31,459 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,02,203ಕ್ಕೆ ಇಳಿಕೆಯಾಗಿದೆ.
ಕೋವಿಡ್-19 (ಸಾಂಕೇತಿಕ ಚಿತ್ರ)
ಕೋವಿಡ್-19 (ಸಾಂಕೇತಿಕ ಚಿತ್ರ)

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಕ್ರಮೇಣ ಕಡಿಮೆಯಾಗುತ್ತಿದ್ದು ಇಂದು 31,459 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,02,203ಕ್ಕೆ ಇಳಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 24,214 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 25,23,998ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಗುರುವಾರ ಒಂದೇ ದಿನ ಮಹಾಮಾರಿಗೆ ಬರೋಬ್ಬರಿ 476 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 27,405ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 5,949 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,43,878ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 273 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com