ಹೆಸರುಘಟ್ಟ ಹುಲ್ಲುಗಾವಲು: ಭೂಪರಿವರ್ತನೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ 'ಹೈ' ಆದೇಶ

ವನ್ಯಜೀವಿ, ಪಕ್ಷಿಗಳ ಆವಾಸಸ್ಥಾನವಾಗಿರುವ ಹೆಸರುಘಟ್ಟ ಹುಲ್ಲುಗಾವಲು ಪ್ರದೇಶದಲ್ಲಿ ಯಾವುದೇ ಭೂ ಪರಿವರ್ತನೆ ಮಾಡದೆ. ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ವಿಭಾಗೀಯ ಪೀಠ ಬುಧವಾರ ಮಧ್ಯಂತರ ಆದೇಶ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವನ್ಯಜೀವಿ, ಪಕ್ಷಿಗಳ ಆವಾಸಸ್ಥಾನವಾಗಿರುವ ಹೆಸರುಘಟ್ಟ ಹುಲ್ಲುಗಾವಲು ಪ್ರದೇಶದಲ್ಲಿ ಯಾವುದೇ ಭೂ ಪರಿವರ್ತನೆ ಮಾಡದೆ. ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ವಿಭಾಗೀಯ ಪೀಠ ಬುಧವಾರ ಮಧ್ಯಂತರ ಆದೇಶ ನೀಡಿದೆ. 

ಗ್ರೇಟರ್ ಹೆಸರುಘಟ್ಟ ಸಂರಕ್ಷಣಾ ಮೀಸಲು ಪ್ರದೇಶದ ಪ್ರಸ್ತಾವನೆ ಕೈಬಿಟ್ಟಿದ್ದ 15ನೇ ರಾಜ್ಯ ವನ್ಯಜೀವಿ ಮಂಡಳಿ ಸಭೆಯ ನಿರ್ಧಾರ ಪ್ರಶ್ನಿಸಿ ಬಿಬಿಎಂಪಿ ಜೀವ ವೈವಿಧ್ಯ ಸಮಿತಿ ಸದಸ್ಯ ವಿಜಯ್ ನಿಶಾಂತ್, ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸ್ಲಲಿಸಿದ್ದರು.

ಅ‌ರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಈ ಪ್ರದೇಶದಲ್ಲಿ ಸಾಕಷ್ಟು ಪಕ್ಷಿ ಸಂಕುಲಗಳು ಇವೆ. ಮುಂದಿನ ವಿಚಾರಣೆವರೆಗೂ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು‘ ಎಂದು ಸೂಚನೆ ನೀಡಿ ವಿಚಾರಣೆಯನ್ನು ಜು.10ಕ್ಕೆ ಮುಂದೂಡಿತು.

‘2021ರ ಜನವರಿ 19ರಂದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ವನ್ಯಜೀವಿ ಮಂಡಳಿ ಸಭೆಯಲ್ಲಿ ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಿತ ಪ್ರದೇಶವನ್ನಾಗಿ ಘೋಷಣೆ ಮಾಡುವ ನಿರ್ಧಾರ ಕೈಬಿಡಲಾಗಿದೆ. ಅಳಿವಿನ ಅಂಚಿನಲ್ಲಿರುವ 40ಕ್ಕೂ ಹೆಚ್ಚು ಪ್ರಾಣಿ ಮತ್ತು ಪಕ್ಷಿ ಸಂಕುಲವನ್ನು ರಕ್ಷಿಸಲು ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡುವ ಅಗತ್ಯವಿದೆ’ ಎಂದು ಅರ್ಜಿದಾರರು ತಿಳಿಸಿದ್ದರು.

‘ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್‌ ಅವರು ವನ್ಯಜೀವಿ ಮಂಡಳಿ ಸದಸ್ಯರಲ್ಲ. ಆದರೂ ಅವರನ್ನು ಆಹ್ವಾನಿಸಿ ಸಭೆ ನಡೆಸಿರುವುದು ಕಾನೂನುಬಾಹಿರ. ಸಭೆಯನ್ನು ಮತ್ತೊಮ್ಮೆ ನಡೆಸಿ ಹೆಸರುಘಟ್ಟ ಹುಲ್ಲುಗಾವಲು ಪ್ರದೇಶವನ್ನು ಸಂರಕ್ಷಿತ ಪ್ರದೇಶವನ್ನಾಗಿ ಘೋಷಣೆ ಮಾಡಬೇಕು’ ಎಂದು ಅರ್ಜಿಯಲ್ಲಿ ಕೋರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com